ಧಾರವಾಡ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ತಾಲೂಕಿನ ಅಮ್ಮಿನಬಾವಿ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂಡಲಗಿಯ ವಿಠಲ (41) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳಕ್ಕೆ ಆಗಮಿಸಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.