HomeLatest NewsBREAKING: ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

BREAKING: ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಈ ದುರಂತ ಸಂಭವಿಸಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಂಡ್ಯದ ಕಾರು ಚಾಲಕ ಗೋವಿಂದರಾಜು, ಅಶೋಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುವನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದ್ದೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular