ತುಮಕೂರು: ಗೊಬ್ಬರ ತುಂಬಿದ್ದ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ದುರಂತ ಸಂಭವಿಸಿದೆ. ಗೊಬ್ಬರ ತುಂಬಿದ್ದ ಲಾರಿ ಹಾಗೂ ಆಲ್ಟೋ ಕಾರಿನ ನಡುವೆ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಕಾರು ಛಿದ್ರವಾಗಿದೆ. ಕಾರಿನ ಚಾಲಕ ಸೇರಿ ನಾಲ್ವರು ಮೃತಪಟ್ಟಿದ್ದಾರೆ.
ಕುಮಾರಸ್ವಾಮಿ, ಗಾಯತ್ರಿ ಸೇರಿದಂತೆ ಮಂಡ್ಯ ಮೂಲದ ನಾಲ್ವರು ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಕುಣಿಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

