ಬೆಂಗಳೂರು : ಡೀಸೆಲ್ ದರ ಏರಿಕೆ ಖಂಡಿಸಿ ಮುಂದಿನ ವಾರ ರಾಜ್ಯಾದ್ಯಂತ ಲಾರಿ ಮುಷ್ಕರ ನಡೆಸಲು ಲಾರಿ ಮಾಲೀಕರ ಸಂಘ ತೀರ್ಮಾನಿಸಿದೆ. ಈ ಹಿನ್ನೆಲೆ ಇಂದು ಶನಿವಾರ ಸಭೆ ನಡೆಸಿ ಮುಷ್ಕರ ನಡೆಸುವ ದಿನಾಂಕ ಘೋಷಣೆ ಮಾಡಲಿದ್ದಾರೆ.
ಡೀಸೆಲ್ ಬೆಲೆ ಏರಿಕೆಯನ್ನು ಕೂಡಲೇ ಮರುಪರಿಶೀಲನೆ ಮಾಡಿ ಕಡಿಮೆ ಮಾಡಬೇಕು. ಬೆಲೆ ಏರಿಕೆ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಮುಷ್ಕರ ಮಾಡುವುದಾಗಿ ಕರೆ ನೀಡಿದ್ದಾರೆ. ರಸ್ತೆಗಳಲ್ಲಿ ಲಾರಿ ನಿಲ್ಲಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2 ಬಾರಿ ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ. ದರ ಏರಿಕೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಿದ್ದೇವೆ. ಹಾಗಾಗಿ ಶನಿವಾರ ಸಭೆ ನಡೆಸಲಿದ್ದೇವೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗ ಹೇಳಿದ್ದಾರೆ.