ಬೆಂಗಳೂರು: ಪ್ರಮುಖ ಐದು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಲಾರಿ ಮಾಲೀಕರ ಸಂಘ ಹೋರಾಟಕ್ಕೆ ಮುಂದಾಗಿದ್ದು, ರಾಜ್ಯಾದ್ಯಂತ ನಾಳೆ ಮಧ್ಯರಾತ್ರಿಯಿಂದ ಲಾರಿ ಮುಷ್ಕರ ಆರಂಭವಾಗಲಿದೆ ಎಂದು ಲಾರಿ ಮಾಲೀಕರ ಸಂಘಡ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಷಣ್ಮುಗಪ್ಪ, ನಾಳೆ ಮಧ್ಯರಾತ್ರಿ ೧೨ ಗಂಟೆಯಿಂದ ಲಾರಿಗಳ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ. ನಮ್ಮ ಬೇಡಿಕೆ ಈಡೇರಿಕೆಯಾಗುವರೆಗೂ ಅನಿರ್ದಿಷ್ಟಾವಧಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಡೀಸೆಲ್ ಬೆಲೆ ಕಡಿಮೆ ಮಾಡಬೇಕು. ಲಾರಿ ಚಾಲಕರ ಮೇಲಿನ ಹಲ್ಲೆ ನಿಲ್ಲಬೇಕು. ಬೆಂಗಳೂರಿನಲ್ಲಿ ಸರಕು ಸಾಗಣೆ ವಾಹನಗಳ ನೋ ಎಂಟ್ರಿ ಆದೇಶ ಹಿಂಪಡೆಯಬೇಕು. ಎಫ್ ಸಿ ಫಿಟ್ನೆಸ್ ಶುಲ್ಕ ಹೆಚ್ಚಿಸಿರುವುದನ್ನು ವಾಪಾಸ್ ಪಡೆಯಬೇಕು ಸೇರಿದಂತೆ ಐದು ಬೇಡಿಕೆಗಳನ್ನು ಈಡೇರಿಸಬೇಕು. ಸರ್ಕಾರ ನಮ್ಮ ಬೇಡಿಕೆ ಈಡೇರಿಸುವವರೆಗೂ ಲಾರಿಗಳು ನಿಂತ ಜಾಗದಿಂದ ಕದಲುವುದಿಲ್ಲ ಎಂದು ತಿಳಿಸಿದ್ದಾರೆ.