ಬೆಂಗಳೂರು: ಐದು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರ ಸಂಘ ಮುಷ್ಕರಕ್ಕೆ ಕರೆ ನೀಡಿದ್ದು, ಇಂದು ನಿನ್ನೆ ಮಧ್ಯರಾತ್ರಿಯಿಂದಲೇ ರಾಜ್ಯಾದ್ಯಂತ ಲಾರಿ ಮುಷ್ಕರ ಆರಂಭವಾಗಿದೆ. ಸರಕು ಸಾಗಾಣೆಯಲ್ಲಿ ಭಾರಿ ವ್ಯತ್ಯಯವುಂಟಾಗುತ್ತಿದೆ.
ಇದರ ಬೆನ್ನಲ್ಲೇ ಲಾರಿ ಮಾಲೀಕರ ಸಂಘದ ಜೊತೆ ರಾಜ್ಯ ಸರ್ಕಾರ ಮಾತುಕತೆಗೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೊತೆ ಸಭೆ ನಡೆಸಲಾಗಿದೆ. ಆದರೆ ಸಚಿವರೊಂದಿಗಿನ ಮೊದಲ ಸುತ್ತಿನ ಮಾತುಕತೆ ವಿಫಲವಾಗಿದ್ದು, ಲಾರಿ ಮಾಲೀಕರು ಮುಷ್ಕರದಿಂದ ಹಿಂದೆ ಸರಿಯಲ್ಲ ಎಂದಿದ್ದಾರೆ.
ಸಂಜೆ ೫:೩೦ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಕರೆದಿದ್ದು, ಸಿಎಂ ಕಾವೇರಿ ನಿವಾಸದಲ್ಲಿ ಲಾರಿ ಮಾಲೀಕರು ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಲಾರಿ ಮಾಲೀಕರ ಸಂಘದ ಬೇಡಿಕೆ ಈಡೇರಿಸಲು, ಮುಷ್ಕರ ನಿರ್ಧಾರದಿಂದ ಹಿಂದೆ ಸರಿಯುವಂತೆ ಮನವೊಲಿಸುವಲ್ಲಿ ಸರ್ಕಾರ ಯಶಸ್ವಿಯಾಗಲಿದೆಯೇ ಕಾದುನೋಡಬೇಕು.