HomeKarnatakaBREAKING NEWS: ಲಾರಿ-ಟೂರಿಸ್ಟ್ ಬಸ್ ಡಿಕ್ಕಿ: 17 ಪ್ರವಾಸಿಗರಿಗೆ ಗಂಭೀರ ಗಾಯ

BREAKING NEWS: ಲಾರಿ-ಟೂರಿಸ್ಟ್ ಬಸ್ ಡಿಕ್ಕಿ: 17 ಪ್ರವಾಸಿಗರಿಗೆ ಗಂಭೀರ ಗಾಯ

ಉಡುಪಿ: ಲಾರಿ ಹಾಗೂ ಟೂರಿಸ್ಟ್ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ 17 ಪ್ರವಾಸಿಗರು ಗಾಯಗೊಂಡಿರುವ ಘಟನೆ ಉಡುಪಿ ತಾಲೂಕಿನ ಉದ್ಯಾವರ ಗ್ರಾಮದಲ್ಲಿ ನಡೆದಿದೆ.

ಉದ್ಯಾವರ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಅಪಘಾತಸಂಭವಿಸಿದೆ. ಕೊಲ್ಲೂರು ದೇವಾಲಯಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್, ಮುಂಜಾನೆ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಪ್ರವಾಸಿಗರ ಬಸ್ ನುಜ್ಜುಗುಜ್ಜಾಗಿದೆ.

ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular