ದಾವಣಗೆರೆ: ಲಾರಿ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಕಾನ್ಸ್ ಟೇಬಲ್ ರಾಮಪ್ಪ ಪೂಜಾರ್ (32) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ಎಸ್.ಎಸ್. ಆಸ್ಪತ್ರೆಗೆ ದಾಖಲಾಗಿದ್ದ ರಾಮಪ್ಪ ಪೂಜಾರ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತ ರಾಮಪ್ಪ ದಾವಣಗೆರೆಯ ಸಶಸ್ತ್ರ ಮೀಸಲು ಪಡೆ ಕಾನ್ಸ್ ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ನಿನ್ನೆ ಹೆಬ್ಬಾಳು ಗ್ರಾಮದ ಟೋಲ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದು ಕಾನ್ಸ್ ಟೇಬಲ್ ರಾಮಪ್ಪ ಮೇಲೆಯೇ ಹರಿದು ಹೋಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ರಾಮಪ್ಪ ಅವರನ್ನು ದಾವಣಗೆರೆ ಎಸ್.ಎಸ್.ಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.