HomeLatest NewsBREAKING: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪಲ್ಟಿಯಾಗಿ ಬಿದ್ದ ಸಿಮೆಂಟ್ ಲಾರಿ: ಓರ್ವ ವಿದ್ಯಾರ್ಥಿ ಸ್ಥಳದಲ್ಲೇ...

BREAKING: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪಲ್ಟಿಯಾಗಿ ಬಿದ್ದ ಸಿಮೆಂಟ್ ಲಾರಿ: ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬೆಳಗಾವಿ: ಸಿಮೆಂಟ್ ಲಾರಿ ಪಲ್ಟಿಯಾಗಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ನಡೆದಿದೆ.

ಹಾರೂಗೇರಿ ಬಳಿ ಈ ಘಟನೆ ನಡೆದಿದೆ. ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಸಿಮೆಂಟ್ ಲಾರಿ ಪಲ್ಟಿಯಾಗಿ ಬಿದ್ದಿದ್ದಿದೆ. 5ನೇ ತರಗತಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕುಡುಚಿಕಡೆಯಿಂದ ಹಾರೂಗೇರ್ ಕಡೆಗೆ ಹೊರಟಿದ್ದ ಸಿಮೆಂಟ್ ಲಾರಿ ತಿರುವುನಲ್ಲಿ ಪಲ್ಟಿಯಾಗಿ ಬಿದ್ದು ಈ ದುರಂತ ಸಂಭವಿಸಿದೆ. 11 ವರ್ಷದ ಅಮಿತ್ ಕಾಂಬಳೆ ಮೃತ ವಿದ್ಯಾರ್ಥಿ. ಅಂಜಲಿ ಕಾಂಬಳೆ (15) ಹಾಗೂ ಅವಿನಾಶ್ ಕಾಂಬಳೆ (14) ಗಂಭೀರವಾಗಿ ಗಾಯಗೊಂಂಡಿದ್ದಾರೆ. ಕುಡುಚಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular