HomeKarnatakaBREAKING: ಲಾರಿ-ಬೈಕ್ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

BREAKING: ಲಾರಿ-ಬೈಕ್ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ರಾಮನಗರ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾಗಡಿ ತಾಲೂಕಿನ ಮರೂರು ಬಳಿ ನಡೆದಿದೆ.

21 ವರ್ಷದ ಅಭಿಷೇಕ್ ಹಾಗೂ ಮನೋಜ್ ಮೃತ ವಿದ್ಯಾರ್ಥಿಗಳು. ಮತ್ತೋರ್ವ ವಿದ್ಯಾರ್ಥಿ ನವೀನ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ವಿದ್ಯಾರ್ಥಿಗಳು ಬೆಂಗಳೂರಿನಿಂದ ಕುಣಿಗಲ್ ಕಡೆ ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಲಾರಿಗೆ ಬೈಕ್ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.

ಮೃತದೇಹಗಳನ್ನು ನೆಲಮಂಗಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular