HomeKarnatakaBIG NEWS: ಮತ್ತೊಂದು ಭೀಕರ ಅಪಘಾತ; ತಾಯಿ-ಮಗ ಸೇರಿ ಮೂವರು ಸ್ಥಳದಲ್ಲೇ ದುರ್ಮರಣ

BIG NEWS: ಮತ್ತೊಂದು ಭೀಕರ ಅಪಘಾತ; ತಾಯಿ-ಮಗ ಸೇರಿ ಮೂವರು ಸ್ಥಳದಲ್ಲೇ ದುರ್ಮರಣ

ತುಮಕೂರು: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅರಸಾಪುರ ಗ್ರಾಮದಲ್ಲಿ ನಡೆದಿದೆ.

ಮೂವರು ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ತಾಯಿ-ಮಗ ಹಾಗೂ ಅಣ್ಣನ ಮಗ ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂವರು ಮಧುಗಿರಿಯಿಂದ ಗೌರಿಬಿದನೂರು ಕಡೆಗೆ ತೆರಳುತ್ತಿದ್ದರು. ಅರಸಾಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೊರಟಗೆರೆ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular