HomeKarnatakaBIG NEWS: ಕಂಬಳ ನೋಡಿ ವಾಪಾಸ್ ಆಗುತ್ತಿದ್ದಾಗ ದುರಂತ; ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದು...

BIG NEWS: ಕಂಬಳ ನೋಡಿ ವಾಪಾಸ್ ಆಗುತ್ತಿದ್ದಾಗ ದುರಂತ; ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದು ಇಬ್ಬರು ದುರ್ಮರಣ

ತುಮಕೂರು: ಬೆಂಗಳೂರು ಕಂಬಳ ವೀಕ್ಷಿಸಿ ಊರಿಗೆ ವಾಪಾಸ್ ಆಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಚಿಗಣಿಪಾಳ್ಯ ಬಳಿ ನಡೆದಿದೆ.

ಬೋರ್ ವೆಲ್ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರಿನ ಪರೆರಾರ ಬಜಪ್ಪೆ ಗ್ರಾಮದ ನಿವಾಸಿ ಕಿಶಾಕ್ ಶೆಟ್ಟಿ (20) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟದ ಫಿಲಿಪ್ಸ್ ನೇರಿ (32) ಮೃತರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಣಿಗಲ್ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular