ಇಂದು ʻಲೂಯಿ ಬ್ರೈಲ್ʼ ಜನ್ಮ ದಿನ : ʻಅಂಧ ಸರ್ಕಾರಿ ನೌಕರʼರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ

ಬೆಂಗಳೂರು : ಜನವರಿ 04 ರ ಇಂದು ಲೂಯಿ ಬ್ರೇಲ್ ಇವರ ಜನ್ಮ ದಿನದ ಅಂಗವಾಗಿ ಅಂಧ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರತಿ ವರ್ಷ ಜನವರಿ 04ರಂದು ನಡೆಯುವ ವಿಶ್ವ ಬೈಲ್ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ದೃಷ್ಟಿದೋಷವುಳ್ಳ ವಿಕಲಚೇತನ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ಒದಗಿಸುವಂತೆ ಪ್ರಧಾನ ಕಾರ್ಯದರ್ಶಿಗಳು, ನ್ಯಾಷನಲ್ ಪೆಡರೇಷನ್ ಆಫ್ ಡಿ. ಬ್ರೆಂಡ್. ಬೆಂಗಳೂರುರವರು ಕೋರಿದ್ದು ಅದರಂತೆ ದಿನಾಂಕ:04.01.2024ರಂದು ದಿವಂಗತ ಲೂಯಿ ಬೈಲ್ ರವರ ಜನ್ಮ ದಿನದ ಅಂಗವಾಗಿ ಅಂಧ ಸರ್ಕಾರಿ ನೌಕರರಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸುವಂತೆ ನಿರ್ದೇಶಕರು, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಇಲಾಖೆರವರು ಮೇಲೆ ಓದಲಾದ ಪತ್ರದಲ್ಲಿ ಕೋರಿರುತ್ತಾರೆ. ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ:04.01.2024ರಂದು ದಿವಂಗತ ಲೂಯಿ ಬ್ರೆಲ್ ಅವರ ಜನ್ಮ ದಿನದ ಅಂಗವಾಗಿ ಆಚರಿಸಲಾಗುವ ವಿಶ್ವ ಬೈಲ್ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ದೃಷ್ಟಿ ವಿಕಲಚೇತನ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯಿಸಿ, ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನೌಕರರು ಹಾಜರಾತಿ ಪ್ರಮಾಣ ಪತ್ರವನ್ನು ಒದಗಿಸುವ ಹಾಗೂ ಈ ವಿಶೇಷ ಸಾಂದರ್ಭಿಕ ರಜೆ ದಿನಕ್ಕೆ ಸರ್ಕಾರದಿಂದ ಯಾವುದೇ ದಿನ ಭತ್ಯೆ ಅಥವಾ ಪ್ರಯಾಣ ಭತ್ಯೆಯನ್ನು ಕ್ರೈಮ್ ನ್ನು ಪರಿಗಣಿಸಲಾಗುವುದಿಲ್ಲವೆಂಬ ಷರತ್ತಿಗೊಳಪಟ್ಟು ದಿನಾಂಕ:04.01.2024ರಂದು ಒಂದು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read