HomeEntertainmentಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ನಿರ್ದೇಶಕ, ನಿರ್ಮಾಪಕರ ಗಲಾಟೆ

ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ನಿರ್ದೇಶಕ, ನಿರ್ಮಾಪಕರ ಗಲಾಟೆ

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರ ನಿರ್ದೇಶಕ, ನಿರ್ಮಾಪಕರ ಗಲಾಟೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ನಿರ್ಮಾಪಕ ಚಂದ್ರು ಅಲಿಯಾಸ್ ಕಡ್ಡಿಪುಡಿ ಚಂದ್ರು ವಿರುದ್ಧ ದೂರು ನೀಡಲಾಗಿದೆ.

ಚಿತ್ರ ನಿರ್ದೇಶಕ ಪಿ.ಸಿ. ಶೇಖರ್ ದೂರು ದಾಖಲಿಸಿದ್ದಾರೆ. ಕಡ್ಡಿಪುಡಿ ಚಂದ್ರು ವಿರುದ್ಧ ಹಣ ನೀಡದೆ ವಂಚನೆ ಹಾಗೂ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಲವ್ ಬರ್ಡ್ಸ್’ ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ಕೆಲಸ ಮಾಡಿದ್ದರು. ಹಣಕಾಸಿನ ವಿಚಾರಕ್ಕೆ ಮನಸ್ತಾಪ ಉಂಟಾಗಿದ್ದು, ತಮಗೆ ನೀಡಬೇಕಿದ್ದ ಸಂಭಾವನೆಯನ್ನು ನಿರ್ಮಾಪಕರು ನೀಡಿಲ್ಲ. ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ‘ಲವ್ ಬರ್ಡ್ಸ್’ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ನಟಿಸಿದ್ದರು. ಕಡ್ಡಿಪುಡಿ ಚಂದ್ರು ನಿರ್ಮಾಣದಲ್ಲಿ ಪಿ.ಸಿ. ಶೇಖರ್ ನಿರ್ದೇಶನದಲ್ಲಿ ಚಿತ್ರ ನಿರ್ಮಾಣವಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular