HomeIndiaBIG NEWS: ಲವ್ ಜಿಹಾದ್ ಪ್ರಕರಣ: ಶೀಘ್ರ ಜಾರಿಯಾಗಲಿದೆ ಜೀವಾವಧಿ ಶಿಕ್ಷೆ ಕಾನೂನು

BIG NEWS: ಲವ್ ಜಿಹಾದ್ ಪ್ರಕರಣ: ಶೀಘ್ರ ಜಾರಿಯಾಗಲಿದೆ ಜೀವಾವಧಿ ಶಿಕ್ಷೆ ಕಾನೂನು

ನವದೆಹಲಿ: ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಜೀವಾವಧಿ ಶಿಕ್ಷೆ ಕಾನುನು ಜಾರಿಗೆ ಬರಲಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

ಅಸ್ಸಾಂ ನಲ್ಲಿ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಜಾರಿಗೆ ತರಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ. ಈ ಮೂಲಕ ಉತ್ತರ ಪ್ರದೇಶದ ಬಳಿಕ ಅಸ್ಸಾಂ ನಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ಬರಲಿದೆ.

ಬಿಜೆಪಿ ಕಾರ್ಯಕರಿಣಿ ಸಭೆಯಲ್ಲಿ ಮಾತನಾಡಿದ ಹಿಮಂತ ಬಿಸ್ವಾ ಶರ್ಮಾ ಈ ಹೇಳಿಕೆ ನೀಡಿದ್ದಾರೆ. ಶೀಘ್ರದಲ್ಲಿಯೇ ಅಸ್ಸಾಂ ನಲ್ಲಿ ಲವ್ ಜಿಹಾದ್ ವಿರುದ್ಧ ಜೀವಾವಧಿ ಶಿಕ್ಷೆ ಕಾನೂನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular