HomeKarnatakaBREAKING: ಹೊಸ ವರ್ಷದ ದಿನವೇ ಹೃದಯ ವಿದ್ರಾವಕ ಘಟನೆ: ಪ್ರೀತಿಸಿ ಮದುವೆಯಾದ ಪತಿ ಸಾವಿನಿಂದ ಮನನೊಂದು...

BREAKING: ಹೊಸ ವರ್ಷದ ದಿನವೇ ಹೃದಯ ವಿದ್ರಾವಕ ಘಟನೆ: ಪ್ರೀತಿಸಿ ಮದುವೆಯಾದ ಪತಿ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕಿಲ್ಲೆ ಕ್ಯಾತರ ಕ್ಯಾಂಪ್ ನಲ್ಲಿ ಪತಿ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಜುನಾಥ್(25), ಅಮೃತಾ(21) ಮೃತಪಟ್ಟವರು ಎಂದು ಹೇಳಲಾಗಿದೆ. ಶಿಕಾರಿಪುರ ಬಳಿ ನಿನ್ನೆ ರಾತ್ರಿ ಬೈಕ್ ಅಪಘಾತವಾಗಿ ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಪತಿ ಮಂಜುನಾಥ್ ಅವರ ಸಾವಿನಿಂದ ಮನನೊಂದಿದ್ದ ಪತ್ನಿ ಅಮೃತಾ ಮನೆಗೆ ಬಂದು ನೇಣಿಗೆ ಶರಣಾಗಿದ್ದಾರೆ. ಪ್ರೀತಿಸಿ ಮದುವೆಯಾಗಿದ್ದ ಮಂಜುನಾಥ್, ಅಮೃತಾ ಸಾವಿನಲ್ಲೂ ಜೊತೆಯಾಗಿದ್ದಾರೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular