HomeKarnatakaಪ್ರೀತಿಸಿ ಮದುವೆಯಾದ ಜೋಡಿ: ಪತಿ ಕಣ್ಣಿಗೆ ಖಾರದಪುಡಿ ಎರಚಿ ಪತ್ನಿ ಕಿಡ್ನಾಪ್

ಪ್ರೀತಿಸಿ ಮದುವೆಯಾದ ಜೋಡಿ: ಪತಿ ಕಣ್ಣಿಗೆ ಖಾರದಪುಡಿ ಎರಚಿ ಪತ್ನಿ ಕಿಡ್ನಾಪ್

ಗದಗ: ಪ್ರೀತಿಸಿ ಮದುವೆಯಾಗಿದ್ದ ಪುತ್ರಿಯನ್ನು ಪೋಷಕರು ಅಪಹರಿಸಿದ ಘಟನೆ ಗದಗದಲ್ಲಿ ನಡೆದಿದೆ. ಗದಗ ನಗರದ ಡಿಸಿ ಮಿಲ್ ಪ್ರದೇಶದಿಂದ ಯುವತಿ ಅಪಹರಿಸಲಾಗಿದೆ.

ಹುಬ್ಬಳ್ಳಿ ಮೂಲದ ಐಶ್ವರ್ಯಾ ಅವರನ್ನು ಅಭಿಷೇಕ್ ಪ್ರೀತಿಸಿ ಮದುವೆಯಾಗಿದ್ದರು. ಯುವತಿ ಪೋಷಕರ ವಿರೋಧದ ನಡುವೆಯೂ ಅವರು ತಿಂಗಳ ಹಿಂದೆ ದೇವಾಲಯದಲ್ಲಿ ಮದುವೆಯಾಗಿದ್ದು, ಜೂನ್ 23 ರಂದು ಗದಗ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆ ನೋಂದಣಿಯಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ 14ರಂದು ಯುವಕನ ಮನೆಯವರು ಆರತಕ್ಷತೆಗೆ ಪ್ಲಾನ್ ಮಾಡಿಕೊಂಡಿದ್ದು, ಇಂದು ಏಕಾಏಕಿ ಮನೆಗೆ ನುಗ್ಗಿದ ಕುಟುಂಬಸ್ಥರು ಯುವತಿಯನ್ನು ಅಪಹರಿಸಿದ್ದಾರೆ. ಪತಿ ಅಭಿಷೇಕ್ ಕಣ್ಣಿಗೆ ಖಾರದಪುಡಿ ಎರಚಿ ಐಶ್ವರ್ಯಾ ಮೇಲೆ ಹಲ್ಲೆ ಮಾಡಿ ಪೋಷಕರು ಎಳೆದುಕೊಂಡು ಹೋಗಿದ್ದಾರೆ. ಅಭಿಷೇಕ್ ಮತ್ತು ಕುಟುಂಬಸ್ಥರು ಗದಗ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular