HomeCrimeSHOCKING: ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ: ಕತ್ತು ಕೊಯ್ದು ಪತ್ನಿ ಹತ್ಯೆ

SHOCKING: ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ: ಕತ್ತು ಕೊಯ್ದು ಪತ್ನಿ ಹತ್ಯೆ

ಮೈಸೂರು: ಕತ್ತು ಕೊಯ್ದು ಪತ್ನಿಯನ್ನು ಕೊಂದು ಪತಿ ಪೊಲೀಸರಿಗೆ ಶರಣಾದ ಘಟನೆ ಮೈಸೂರಿನ ಹೆಬ್ಬಾಳದ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ.

ಶ್ರುತಿ ಕೊಲೆಯಾದ ಮಹಿಳೆ. ಪತ್ನಿ ಕೊಲೆ ಮಾಡಿದ ಪತಿ ಅರುಣ್ ಪೊಲೀಸರಿಗೆ ಶರಣಾಗಿದ್ದಾನೆ. ಕೂರ್ಗಳ್ಳಿ ನಿವಾಸಿ ಶ್ರುತಿ ಮತ್ತು ಚಾಮರಾಜನಗರ ಮೂಲದ ಅರುಣ್ 4 ವರ್ಷದ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರ ಬೇರೆ ಜಾತಿ ಹಿನ್ನೆಲೆ ಎರಡೂ ಮನೆಯವರ ಕಡೆ ಮದುವೆಗೆ ಒಪ್ಪಿಗೆ ಇರಲಿಲ್ಲ.

ಮದುವೆಯ ನಂತರ ಪೋಷಕರಿಂದ ಶ್ರುತಿ, ಅರುಣ್ ದಂಪತಿ ದೂರವಾಗಿದ್ದರು. ಯಾರ ಸಂಪರ್ಕವಿಲ್ಲದೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಸದ್ಯ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಮೈಸೂರಿನ ಹೆಬ್ಬಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular