HomeKarnatakaಜಾತಿ ಕಾರಣಕ್ಕೆ ಮದುವೆಗೆ ಒಪ್ಪದೇ ನಿಂದಿಸಿದ ಪ್ರಿಯತಮನ ಮನೆಯವರು: ಬಾಲಕಿ ಆತ್ಮಹತ್ಯೆ

ಜಾತಿ ಕಾರಣಕ್ಕೆ ಮದುವೆಗೆ ಒಪ್ಪದೇ ನಿಂದಿಸಿದ ಪ್ರಿಯತಮನ ಮನೆಯವರು: ಬಾಲಕಿ ಆತ್ಮಹತ್ಯೆ

ಶಿವಮೊಗ್ಗ: ಪ್ರಿಯಕರನ ಮನೆಯವರು ಜಾತಿ ಕಾರಣಕ್ಕೆ ಮದುವೆಗೆ ಒಪ್ಪಿಕೊಳ್ಳದೆ ನಿಂದಿಸಿದ ಹಿನ್ನೆಲೆಯಲ್ಲಿ ಮನನೊಂದ ಅಪ್ರಾಪ್ತೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹೊಸನಗರ ತಾಲೂಕಿನ ಗ್ರಾಮವೊಂದರ 17 ವರ್ಷದ ಬಾಲಕಿ ಮತ್ತು ಅದೇ ಗ್ರಾಮದ ಯುವಕ ಮೂರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಯುವಕನು ಬಾಲಕಿ ಮತ್ತು ಆಕೆಯ ತಾಯಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ತಾನು ಪ್ರೀತಿಸುತ್ತಿರುವ ವಿಷಯ ತಿಳಿಸಿ ಮದುವೆ ಮಾಡಿಕೊಳ್ಳುವುದಾಗಿ ಹೇಳಿದ್ದಾನೆ. ಆಗ ಆತನ ಪೋಷಕರು ವಿರೋಧಿಸಿ ಜಾತಿ ಕಾರಣಕ್ಕೆ ನಿಂದಿಸಿದ್ದಾರೆ ಎನ್ನಲಾಗಿದೆ.

ಇದರಿಂದ ಮನನೊಂದ ಬಾಲಕಿ ನವೆಂಬರ್ 19ರಂದು ಮನೆಯಲ್ಲಿ ವಿಷ ಸೇವಿಸಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 21ರಂದು ಮೃತಪಟ್ಟಿದ್ದಾಳೆ. ಯುವಕ ಸೇರಿದಂತೆ ಆತನ ಕುಟುಂಬದ 6 ಮಂದಿ ವಿರುದ್ಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular