HomeKarnatakaಪ್ರೀತಿ ವಿಚಾರಕ್ಕೆ ಯುವಕನ ಕೊಲೆ: ನಾಲ್ವರು ಅರೆಸ್ಟ್

ಪ್ರೀತಿ ವಿಚಾರಕ್ಕೆ ಯುವಕನ ಕೊಲೆ: ನಾಲ್ವರು ಅರೆಸ್ಟ್

ಕಲಬುರಗಿ: ಪ್ರೀತಿ ವಿಚಾರಕ್ಕೆ ಯುವಕನ ಕೊಲೆಗೈದ ನಾಲ್ವರು ಆರೋಗ್ಯಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ 2ನೇ ಸೆಮಿಸ್ಟರ್ ಓದುತ್ತಿದ್ದ ಅಭಿಷೇಕ್(18) ಕೊಲೆಯಾದ ಯುವಕ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಸಂಬಂಧಿಕರಾದ ಅನಿಲ್ ರಾಥೋಡ್, ಸಂತೋಷ್, ಸಾಗರ್ ಜಾಧವ್, ಹೇಮಂತ್ ರಾಥೋಡ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಗಂಗಾನಗರ ನಿವಾಸಿಯಾಗಿದ್ದ ಅಭಿಷೇಕ್, ಅಪ್ರಾಪ್ತ ಬಾಲಕಿ ಕೆಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ವಾಟ್ಸಾಪ್ ಚಾಟಿಂಗ್, ಸಂಭಾಷಣೆ ಕೂಡ ಮಾಡುತ್ತಿದ್ದರು. ಬಾಲಕಿಯ ಕುಟುಂಬದವರಿಗೆ ವಿಷಯ ತಿಳಿದು ಎಚ್ಚರಿಕೆ ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೋಮವಾರ ರಾತ್ರಿ ಬಾಲಕಿ ಫೋನ್ ಮಾಡಿ ಮನೆಗೆ ಕರೆಸಿಕೊಂಡಿದ್ದಾಳೆ. ಮನೆಗೆ ಹೋದ ಅಭಿಷೇಕ್ ಕುಟುಂಬದವರ ಕೈಗೆ ಸಿಕ್ಕಿಬಿದ್ದಿದ್ದು, ಕಟ್ಟಿಗೆ, ಕಬ್ಬಿಣದ ರಾಡ್ ನಿಂದ ತೀವ್ರವಾಗಿ ಥಳಿಸಲಾಗಿದೆ. ಗಂಭೀರವಾಗಿ ಹಲ್ಲೆಗೊಳಗಾದ ಅಭಿಷೇಕ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ವಿಶ್ವವಿದ್ಯಾಲಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular