ಬೆಳಗಾವಿ : ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಅಂಗನವಾಡಿ ಶಿಕ್ಷಕಿಯ ಬರ್ಬರ ಹತ್ಯೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಈ ಘಟನೆ ನಡೆದಿದೆ.ಕೊಲೆಯಾದ ಶಿಕ್ಷಕಿಯನ್ನು ಅಶ್ವಿನಿ ಪಾಟೀಲ್ ಎಂದು ಗುರುತಿಸಲಾಗಿದೆ. ಶಂಕರ್ ಪಾಟೀಲ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಅಶ್ವಿನಿ ಪತಿ ಗೋವಾದಲ್ಲಿ ಕೆಲಸ ಮಾಡುತ್ತಿದ್ದರು.
ಅಶ್ವಿನಿ ಬಳಿ ಶಂಕರ್ ಪಾಟೀಲ್ 5 ಲಕ್ಷ ಸಾಲ ಪಡೆದುಕೊಂಡಿದ್ದನು. ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ರೊಚ್ಚಿಗೆದ್ದ ಶಂಕರ್ ಆಕೆಯನ್ನು ಜಾತ್ರೆಗೆ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ. ಅಲ್ಲದೇ ಈತ ಅಶ್ವಿನಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದನು ಎನ್ನಲಾಗಿದೆ. ಜಾತ್ರೆಗೆ ಹೋಗಿ ಅಶ್ವಿನಿಮನೆ ಬಾರದೇ ಹಿನ್ನೆಲೆ ನಂದಗಡ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ನಂತರ ಕಾರವಾರದ ರಾಮನಗರದಲ್ಲಿ ಅಶ್ವಿನಿ ಮೃತದೇಹ ಪತ್ತೆಯಾಗಿತ್ತು. ನಂತರ ಅನುಮಾನಗೊಂಡ ಪೊಲೀಸರು ಶಂಕರ್ ಪಾಟೀಲ್ ನನ್ನು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಮೊದಲು ಅಶ್ವಿನಿ ಹಾಗೂ ಶಂಕರ್ ಇಬ್ಬರು ಸ್ನೇಹಿತರಾಗಿದ್ದರು. ಆದರೆ ಸ್ನೇಹ ಅಕ್ರಮ ಸಂಬಂಧಕ್ಕೆ ತಿರುಗಿದೆ. ಅಶ್ವಿನಿಪತಿ ಕಳೆದ ಸುಮಾರು ವರ್ಷದಿಂದ ಗೋವಾದಲ್ಲಿ ಕೆಲಸ ಮಾಡುತ್ತಿದ್ದರು. ಮಗ ಕೂಡ ಬೇರೆ ಊರಿನಲ್ಲಿ ಕೆಲಸ ಮಾಡುತ್ತಿದ್ದರು.