HomeCrimeಮದುವೆಗೆ ಒಪ್ಪದ ಪ್ರೇಯಸಿ ಕಚೇರಿಯಿಂದ ಹೊರಗೆ ಬರ್ತಿದ್ದಂತೆ 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಂದ...

ಮದುವೆಗೆ ಒಪ್ಪದ ಪ್ರೇಯಸಿ ಕಚೇರಿಯಿಂದ ಹೊರಗೆ ಬರ್ತಿದ್ದಂತೆ 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಂದ ಪಾಗಲ್ ಪ್ರೇಮಿ

ಬೆಂಗಳೂರು: ಮದುವೆಗೆ ಒಪ್ಪದ ಪ್ರೇಯಸಿಗೆ 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಜೀವನ್ ಬೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಾತಿ ಬೇರೆಯಾಗಿದ್ದ ಕಾರಣಕ್ಕೆ ಪ್ರೇಯಸಿಯ ಪೋಷಕರು ಮದುವೆ ಮಾಡಿಕೊಡಲು ನಿರಾಕರಿಸಿದ್ದಾರೆ. ಈ ಕಾರಣಕ್ಕೆ ಪಾಗಲ್ ಪ್ರೇಮಿ ಪ್ರೇಯಸಿಯನ್ನು ಕೊಲೆ ಮಾಡಿದ್ದಾನೆ. ಆಂಧ್ರಪ್ರದೇಶದ ಕಾಕಿನಾಡ ಮೂಲದ ಲೀಲಾಪವಿತ್ರಾ(25) ಕೊಲೆಯಾದ ಯುವತಿ. ಆರೋಪಿ ಆಂಧ್ರಪ್ರದೇಶದ ಶ್ರೀಕಾಕುಳಂ ಮೂಲದ ದಿನಕರ್(28) ನನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ರಾತ್ರಿ 7.30 ರ ಸುಮಾರಿಗೆ ಮುರುಗೇಶ್ ಪಾಳ್ಯದ ಒಮೆಗಾ ಹೆಲ್ತ್ ಕೇರ್ ಕಂಪನಿ ಕಚೇರಿ ಬಳಿ ಆರೋಪಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇಬ್ಬರೂ 5 ವರ್ಷಗಳಿಂದ ಪ್ರೀತಿಸಿದ್ದರು. ಜಾತಿ ಬೇರೆಯಾಗಿದ್ದ ಕಾರಣಕ್ಕೆ ಯುವತಿ ಮನೆಯಲ್ಲಿ ಪೋಷಕರು ಮದುವೆಗೆ ಒಪ್ಪಿರಲಿಲ್ಲ. ಮದುವೆಯಾಗಲು ಯುವತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಕೃತ್ಯವೆಸಗಿದ್ದಾನೆ. ಪ್ರೀತಿಸಿದ ಯುವತಿ ನನಗೆ ಸಿಗದಿದ್ದರೆ ಬೇರೆ ಯಾರಿಗೂ ಸಿಗಬಾರದು ಎಂದು ಆಕೆಯನ್ನು ಕೊಲೆ ಮಾಡಿದ್ದಾನೆ. ಯುವತಿ ಕೆಲಸ ಮುಗಿಸಿ ಕಚೇರಿಯಿಂದ ಹೊರಗೆ ಬರುತ್ತಿದ್ದಂತೆ ಚಾಕುವಿನಿಂದ ಇರಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಲೀಲಾ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಈ ವೇಳೆಗಾಗಲೇ ಮೃತಪಟ್ಟಿದ್ದರೆನ್ನಲಾಗಿದೆ. ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular