ಪ್ರಿಯತಮೆ ಮೇಲೆ ಸ್ನೇಹಿತರಿಂದ ಅತ್ಯಾಚಾರ: ಪ್ರಿಯಕರನಿಂದಲೇ ಸಾಥ್

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅಸ್ಸಾಂನಿಂದ ಬೆಂಗಳೂರಿಗೆ ಯುವತಿ ಕರೆತಂದಿದ್ದ ಪ್ರಿಯಕರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಜತೆಗೆ ತನ್ನ ಸ್ನೇಹಿತರು ಅತ್ಯಾಚಾರ ಎಸಗಲು ಸಹಕಾರ ನೀಡಿದ್ದಾನೆ.

ಅಸ್ಸಾಂ ಮೂಲದ 20 ವರ್ಷದ ಸಂತ್ರಸ್ತೆ ಪರಪ್ಪನ ಅಗ್ರಹಾರ ಠಾಣೆಗೆ ದೂರು ನೀಡಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿ ಶಾಹಿದ್ ಮತ್ತು ಸಂತ್ರಸ್ತೆ ಪರಿಚಿತರಾಗಿ ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡಿದ್ದರು. ನಂತರ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು. ಮದುವೆಯಾಗುವುದಾಗಿ ಯುವತಿಯನ್ನು ಅಸ್ಸಾಂನಿಂದ ಬೆಂಗಳೂರಿಗೆ ಕಳೆದ ಜೂನ್ ನಲ್ಲಿ ಆರೋಪಿ ಕರೆದುಕೊಂಡು ಬಂದಿದ್ದ.

ದೊಡ್ಡನಾಗಮಂಗಲದ ಬಾಡಿಗೆ ಮನೆಯಲ್ಲಿ ಯುವತಿಯನ್ನು ಇರಿಸಿದ್ದ. ವಿರೋಧದ ನಡುವೆಯೂ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ದೃಶ್ಯಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದ. ಆತನಿಗೆ ಬೇರೆ ಮಹಿಳೆ ಜೊತೆಗೆ ಮದುವೆಯಾಗಿರುವ ವಿಚಾರ ಸಂತ್ರಸ್ತೆಗೆ ಗೊತ್ತಾಗಿ ಪ್ರಶ್ನಿಸಿದಾಗ ಹಲ್ಲೆ ಮಾಡಿ ಕೂಡಿಹಾಕಿದ್ದಾನೆ. ನಂತರ ನಾಲ್ವರು ಅಪರಿಚಿತರನ್ನು ಮನೆಗೆ ಕರೆಸಿ ಆಕೆಯ ರೂಮ್ ಗೆ ಕಳುಹಿಸಿದ್ದು, ಎಷ್ಟೇ ಬೇಡಿಕೊಂಡರೂ ಬಿಡದೆ ಅವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಮನೆಯಿಂದ ಹೇಗೋ ತಪ್ಪಿಸಿಕೊಂಡು ಬಂದ ಯುವತಿ ಪರಪ್ಪನ ಅಗ್ರಹಾರ ಠಾಣೆಗೆ ದೂರು ನೀಡಿದ್ದಾಳೆ. ಅತ್ಯಾಚಾರ ಮತ್ತು ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡಿದ ಆರೋಪದಡಿ ಶಾಹಿದ್ ಮತ್ತು ಆತನ ಸ್ನೇಹಿತರ ವಿರುದ್ಧ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read