HomeLatest Newsದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು, ಬಾವಿಗೆ ಹಾರಿ ಆತ್ಮಹತ್ಯೆ

ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು, ಬಾವಿಗೆ ಹಾರಿ ಆತ್ಮಹತ್ಯೆ

ಮಂಗಳೂರು: ವಿವಾಹಿತ ಪ್ರೇಮಿಗಳಿಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆ ತೆಂಕಮಿಜಾರು ಬಳಿ ನಡೆದಿದೆ.

ಬುಡಗಮಿಜಾರು ಗ್ರಾಮದ ವಿವಾಹಿತೆ 29 ವರ್ಷದ ನಮೀಕ್ಷಾ ಶೆಟ್ಟಿ, ಆಕೆಯ ಪ್ರಿಯಕರ ನಿಡೋಡಿಯಲ್ಲಿ ವಾಸವಾಗಿದ್ದ ಬಾಗಲಕೋಟೆ ಮೂಲದ ಚಾಲಕ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.

ನಮೀಕ್ಷಾಗೆ ಮದುವೆಯಾಗಿದ್ದು, ಇಬ್ಬರು ಪುಟ್ಟ ಗಂಡು ಮಕ್ಕಳಿದ್ದಾರೆ. ಅವರ ಪತಿ ಪುಣೆಯಲ್ಲಿ ಉದ್ಯೋಗದಲ್ಲಿದ್ದಾರೆ. ಮೂಲತಃ ಬಾಗಲಕೋಟೆ ನಿವಾಸಿಯಾಗಿರುವ ಪ್ರಶಾಂತ್ ಗೂ ಬಾಗಲಕೋಟೆಯಲ್ಲಿ ಮದುವೆಯಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂ ಮೂಲಕ ಪ್ರಶಾಂತ್ ಪರಿಚಯವಾಗಿದ್ದು, ಪ್ರೇಮ ಸಂಬಂಧಕ್ಕೆ ತಿರುಗಿತ್ತು. ಕಾರಣಾಂತರದಿಂದ ಇಬ್ಬರ ಮಧ್ಯೆ ಜಗಳವಾಗಿ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಮೂಡಬಿದರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular