HomeKarnatakaಮದುವೆಗೆ ಒಪ್ಪದ ಮನೆಯವರು: ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು

ಮದುವೆಗೆ ಒಪ್ಪದ ಮನೆಯವರು: ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು

ಕಲಬುರಗಿ: ಮನೆಯವರು ಮದುವೆಗೆ ಒಪ್ಪದ ಕಾರಣಕ್ಕೆ ಮನನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ವಾಡಿಯಲ್ಲಿ ನಡೆದಿದೆ.

ಚಿತ್ತಾಪುರ ತಾಲೂಕಿನ ಚೌಕಂಡಿ ತಾಂಡಾ ಪ್ರದೇಶದಲ್ಲಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾಡಿ ಸಮೀಪದ ರಾಂಪುರ ಹಳ್ಳಿಯ ಅಪ್ರಾಪ್ತ 8ನೇ ತರಗತಿ ವಿದ್ಯಾರ್ಥಿನಿ ಹಾಗೂ ಕೊಲ್ಲೂರ ಗ್ರಾಮದ ನಿವಾಸಿಯಾಗಿರುವ ಐಟಿಐ ವಿದ್ಯಾರ್ಥಿ 19 ವರ್ಷದ ಯುವಕ ಮೃತಪಟ್ಟವರು. ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸಿದ್ದ ಇವರು ಮದುವೆಯಾಗಲು ಬಯಸಿದ್ದರು. ಆದರೆ, ಮದುವೆಗೆ ಪೋಷಕರು ಒಪ್ಪದ ಕಾರಣಕ್ಕೆ ಒಟ್ಟಿಗೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular