ಉತ್ತರ ಪ್ರದೇಶ : ಪ್ರೇಮಿಗಳು ಸಾರ್ವಜನಿಕ ಸ್ಥಳದಲ್ಲೇ ರೊಮ್ಯಾನ್ಸ್ ಮಾಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ. ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ ಎನ್ನಲಾದ ಘಟನೆಯ ವೀಡಿಯೋ ವೈರಲ್ ಆಗಿದೆ.
ಈ ಪ್ರೇಮಿಗಳು ರಸ್ತೆಯ ಬೀದಿಗಳನ್ನು ಪಿಕ್ನಿಕ್ ಪಾರ್ಕ್ಗಳಾಗಿ ಮಾಡಿಕೊಂಡಿದ್ದಾರೆ. ಕಾಲೇಜಿಗೆ ಚಕ್ಕರ್ ಹಾಕಿ ರೊಮ್ಯಾನ್ಸ್ ಮಾಡಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ನೆರೆಹೊರೆಯ ನಿವಾಸಿಯೊಬ್ಬರು ವೀಡಿಯೊ ಮಾಡಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದ್ದಾರೆ.

