HomeLatest Newsಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮೂರು ದಿನ ಭಾರಿ ಮಳೆ ಮುನ್ಸೂಚನೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮೂರು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮೇ 29ರಂದು ರೆಡ್ ಅಲರ್ಟ್ ನೀಡಲಾಗಿದೆ. ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಧಾರವಾಡ, ಬೀದರ್, ಹಾವೇರಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮೇ 30ರಂದು ರೆಡ್ ಅಲರ್ಟ್ ನೀಡಲಾಗಿದೆ. ಉಡುಪಿ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ತುಮಕೂರು, ಮಂಡ್ಯ, ಚಿತ್ರದುರ್ಗ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 31 ರಂದು ಕರಾವಳಿಯ ಎಲ್ಲಾ ಜಿಲ್ಲೆಗಳು ಕೊಡಗು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular