HomeLatest Newsಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯಾದ್ಯಂತ 2 ದಿನ ಭಾರೀ ಮಳೆ ಸಾಧ್ಯತೆ | HEAVY RAIN...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯಾದ್ಯಂತ 2 ದಿನ ಭಾರೀ ಮಳೆ ಸಾಧ್ಯತೆ | HEAVY RAIN ALERT

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯಾದ್ಯಂತ ಎರಡು ದಿನ ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳವಾರ ಮತ್ತು ಬುಧವಾರ ರಾಜ್ಯದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಆಗಸ್ಟ್ 19 ಮತ್ತು 20ರಂದು ರಾಜ್ಯಾದ್ಯಂತ ವ್ಯಾಪಕ ಮಳೆ ಆಗಲಿದೆ. ಆಗಸ್ಟ್ 21ರಂದು ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ತಿಂಗಳ ಕೊನೆಯ ವಾರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬಿಸಿಲಿನ ವಾತಾವರಣ ನಿರ್ಮಾಣವಾಗಲಿದೆ. ಬೆಂಗಳೂರಿನಲ್ಲಿ ಐದು ದಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular