HomeLatest Newsಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ಆಗಸ್ಟ್ 13 ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಮುಂದಿನ ವಾರ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 13 ರಿಂದ 17ರ ವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ ಜಿಲ್ಲೆಗಳ ಹಲವು ಕಡೆ ಭಾರಿ ಮಳೆ ಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 12 ರಿಂದ 18ರವರೆಗೆ ಬೆಂಗಳೂರಿನ ಕೆಲವೆಡೆ ಹಗುರದಿಂ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular