HomeIndiaVIRAL VIDEO | ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಪತಿಗೆ ಪೊಲೀಸರ ಮುಂದೆಯೇ ಪತ್ನಿ 'ಕಪಾಳಮೋಕ್ಷ'

VIRAL VIDEO | ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಪತಿಗೆ ಪೊಲೀಸರ ಮುಂದೆಯೇ ಪತ್ನಿ ‘ಕಪಾಳಮೋಕ್ಷ’

ಅನೈತಿಕ ಸಂಬಂಧ ಹೊಂದಿದ್ದ ತನ್ನ ಪತಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ, ಪೊಲೀಸರ ಮುಂದೆಯೇ ಹಿಗ್ಗಾಮುಗ್ಗಾ ಥಳಿಸಿದ್ದು ಇದರ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಈ ವಿಡಿಯೋ ಈಗಾಗಲೇ 6 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಗಳಿಸಿದ್ದು, ಅಲ್ಲದೆ ನೆಟ್ಟಿಗರಿಂದ ತರಹೇವಾರಿ ಕಾಮೆಂಟ್ ಬರುತ್ತಿದೆ.

ಈ ಘಟನೆ ಉತ್ತರ ಪ್ರದೇಶದ ಹಾಪುರದಲ್ಲಿ ನಡೆದಿದ್ದು, ತನ್ನ ಪತಿಯ ವರ್ತನೆ ಬಗ್ಗೆ ಅನುಮಾನ ಹೊಂದಿದ್ದ ಪತ್ನಿ, ಆತ ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟಾಗ ಆತನಿಗೆ ಗೊತ್ತಾಗದಂತೆ ಹಿಂಬಾಲಿಸಿದ್ದಾಳೆ. ಅಲ್ಲದೆ ಪೊಲೀಸರಿಗೂ ಕೂಡ ಈ ಕುರಿತಂತೆ ಮೊದಲೇ ಮಾಹಿತಿ ನೀಡಿದ್ದಳು ಎನ್ನಲಾಗಿದೆ.

ಕೆಲಸದ ನೆಪದಲ್ಲಿ ಮನೆಯಿಂದ ಹೊರ ಬಿದ್ದಿದ್ದ ಪತಿ ನೇರವಾಗಿ ತನ್ನ ಗರ್ಲ್ ಫ್ರೆಂಡ್ ಭೇಟಿಗೆ ಹೋಗಿದ್ದಾನೆ. ಆತನನ್ನು ಹಿಂಬಾಲಿಸಿದ್ದ ಪತ್ನಿ ರೆಡ್ ಹ್ಯಾಂಡ್ ಆಗಿ ಇಬ್ಬರನ್ನು ಹಿಡಿದಿದ್ದು, ವಂಚಿಸಿದ್ದ ಪತಿಗೆ ತಪರಾಕಿ ನೀಡಿದ್ದಾಳೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ಆತನನ್ನು ಪಾರು ಮಾಡಿ ಠಾಣೆಗೆ ಕರೆದೊಯ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲಿ ಪತಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು ಕಳೆದ ಮೂರು ವರ್ಷಗಳಿಂದ ನಾನು ಸಂಬಂಧದಲ್ಲಿ ಇದ್ದೇನೆ ಎಂದು ತಿಳಿಸಿದ್ದಾನೆ. ಇದೀಗ ಪೊಲೀಸರು ಪತಿ-ಪತ್ನಿ ನಡುವೆ ರಾಜಿ ಪಂಚಾಯಿತಿ ನಡೆಸಿದ್ದಾರೆ ಎನ್ನಲಾಗಿದ್ದು, ಆದರೆ ವಿಡಿಯೋ ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.

For Latest News Updates, Join Our Whatsapp Community🚩
RELATED ARTICLES

Most Popular