HomeKarnatakaಸಿಲಿಂಡರ್, ಇಂಧನ ಕೊರತೆ; ವದಂತಿ ಹರಡಿದರೆ ಕಾನೂನು ಕ್ರಮ

ಸಿಲಿಂಡರ್, ಇಂಧನ ಕೊರತೆ; ವದಂತಿ ಹರಡಿದರೆ ಕಾನೂನು ಕ್ರಮ

ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇದೆ. ಎಲ್‌ಪಿಜಿ ಸಿಲಿಂಡರ್ ಸಿಗುತ್ತಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಜನರು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಬೇರೆ ಕಡೆಯ ಫೋಟೋ, ವಿಡಿಯೋವನ್ನು ಹಾಕಿ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಇದರಿಂದಾಗಿ ಜನರು ಪೆಟ್ರೋಲ್ ಬಂಕ್ ಮುಂದೆ ಸಾಲುಗಟ್ಟಿ ನಿಲ್ಲುವಂತೆ ಆಗಿದೆ.

ಬೆಳಗಾವಿಯಲ್ಲಿಯೂ ಕಳೆದ ಮೂರು ದಿನಗಳ ಹಿಂದೆ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಜಿಲ್ಲೆಯಲ್ಲಿ ಸಿಲಿಂಡರ್, ಇಂಧನ ಕೊರತೆ ಇಲ್ಲ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದ್ದಾರೆ.

ಗೃಹಬಳಕೆ ಸಿಲಿಂಡರ್ ಹಾಗೂ ಇಂಧನದ ಯಾವುದೇ ಕೊರತೆಯಿಲ್ಲ.‌ ಸಾರ್ವಜನಿಕರು ವದಂತಿಗಳಿಗೆ ಕಿವಿಗೊಟ್ಟು ಆತಂಕಕ್ಕೆ ಒಳಗಾಗಬಾರದು ಎಂದು ಮೊಹಮ್ಮದ್ ರೋಷನ್ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, “ಬೆಳಗಾವಿ ಜಿಲ್ಲೆ ಹಾಗೂ ನಗರದಲ್ಲಿ ಯಾವುದೇ ರೀತಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ಇಲ್ಲ. ಬಂಕ್‌ಗಳಲ್ಲಿ ಸ್ಟಾಕ್ ಖಾಲಿಯಾದರೆ ನಗರದಲ್ಲಿ ಕೇವಲ ಐದು ಗಂಟೆಗಳಲ್ಲಿ ಸ್ಟಾಕ್‌ ಲಭ್ಯವಾಗಲಿದೆ. ಇಂಧನ ಕೊರತೆ ವದಂತಿಗೆ ಕಿವಿಗೊಡಬಾರದು” ಎಂದರು.

“ಇಂಧನ ಪೂರೈಕೆ ಕಂಪನಿ ಹಾಗೂ ಬಂಕ್‌ ಮಾಲೀಕರ ಜತೆ ಈಗಾಗಲೇ ಚರ್ಚೆ ಮಾಡಲಾಗಿದ್ದು, ಇಂಧನ ಕೊರತೆ ಎಲ್ಲಿಯೂ ಕಂಡುಬಂದಿರುವುದಿಲ್ಲ” ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

“ಜನರು ಆತಂಕಕ್ಕೆ ಒಳಗಾಗಿ ಇಂಧನ ಸಂಗ್ರಹಕ್ಕೆ ಮುಂದಾಗಿರುವುದರಿಂದ ಈ ರೀತಿಯ ಗೊಂದಲ ಉಂಟಾಗಿದೆ. ಬಂಕ್‌ಗಳಲ್ಲಿ ಬಾಟಲ್ ಅಥವಾ ಕ್ಯಾನ್‌ಗಳಲ್ಲಿ ಪೆಟ್ರೋಲ್ ಅಥವಾ ಡೀಸೆಲ್ ಮಾರಾಟ ಮಾಡುವುದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿಯನ್ನು ಹರಡಿದರೆ ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ ಗುಲಾಬ್ ರಾವ್ ಬೋರಸೆ ಮಾತನಾಡಿ, “ಯಾವುದೇ ಪೆಟ್ರೋಲ್‌ ಬಂಕ್‌ಗಳಲ್ಲಿ ಬಾಟಲ್ ಅಥವಾ ಕ್ಯಾನ್‌ಗಳಲ್ಲಿ ಇಂಧನ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ‌. ಅಕ್ರಮವಾಗಿ ಇಂಧನ‌ ಸಂಗ್ರಹ ಮತ್ತು ಮಾರಾಟ ತಡೆಯಲು ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು” ಎಂದರು.

“ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೇ ಶಾಂತ ರೀತಿಯಿಂದ ಸಹಕರಿಸಬೇಕು. ಏನೇ ಅಕ್ರಮ ಅಥವಾ ಗಲಾಟೆ ಕಂಡುಬಂದರೆ 112 ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಬೇಕು” ಎಂದು ಹೇಳಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular