HomeKarnatakaಅಡುಗೆ ಅನಿಲ ಗ್ರಾಹಕರಿಗೆ ಗುಡ್ ನ್ಯೂಸ್: ಇ-ಕೆವೈಸಿ ಉಚಿತ, ಯಾವುದೇ ಕಾಲಮಿತಿ ಇಲ್ಲ

ಅಡುಗೆ ಅನಿಲ ಗ್ರಾಹಕರಿಗೆ ಗುಡ್ ನ್ಯೂಸ್: ಇ-ಕೆವೈಸಿ ಉಚಿತ, ಯಾವುದೇ ಕಾಲಮಿತಿ ಇಲ್ಲ

ದಾವಣಗೆರೆ: ಅಡುಗೆ ಅನಿಲ ಸಂಪರ್ಕ ಹೊಂದಿರುವ ಫಲಾನುಭವಿಗಳು ಆಧಾರ್ ಸಂಖ್ಯೆಯ ದಾಖಲೆಯೊಂದಿಗೆ ತಮ್ಮ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ ಉಚಿತವಾಗಿ ಇ-ಕೆವೈಸಿ ದೃಢೀಕರಣ ನೀಡಬೇಕು. ಆದರೆ ಇದಕ್ಕೆ ಯಾವುದೇ ಕಾಲಮಿತಿ ಇಲ್ಲ ಮತ್ತು ಇ-ಕೆವೈಸಿಗೆ ಹಣ ನೀಡುವಂತಿಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ. .

ಉಜ್ವಲ ಯೋಜನೆಯಡಿ ಗ್ಯಾಸ್ ಸಂಪರ್ಕ ಪಡೆದಿರುವವರು ಹಾಗೂ ಉಳಿದ ಗ್ಯಾಸ್ ಸಂಪರ್ಕ ಹೊಂದಿರುವ ಗ್ರಾಹಕರು ಡಿ. 31 ರೊಳಗಾಗಿ ತಮ್ಮ ಏಜೆನ್ಸಿಗೆ ತೆರಳಿ ಉಚಿತವಾಗಿ ಇ-ಕೆವೈಸಿ ದೃಢೀಕರಣ ನೀಡಬೇಕು. ಆಗ ಮಾತ್ರ ಸಬ್ಸಿಡಿ ಹಣ ದೊರೆಯುತ್ತದೆ ಮತ್ತು ಸಿಲಿಂಡರ್ ಸರಬರಾಜು ಮಾಡಲಾಗುತ್ತದೆ ಎಂಬ ವದಂತಿ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಟಿಯಾಗಿದ್ದರಿಂದ ಅವರು ಸ್ಪಷ್ಟನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular