HomeIndiaLPG ಗ್ರಾಹಕರಿಗೆ ಗುಡ್ ನ್ಯೂಸ್ : ‘ಗ್ಯಾಸ್ ಸಿಲಿಂಡರ್’ ಬುಕಿಂಗ್ ಅವಧಿ ಇಳಿಕೆ, ಹೊಸ ನಿಯಮ...

LPG ಗ್ರಾಹಕರಿಗೆ ಗುಡ್ ನ್ಯೂಸ್ : ‘ಗ್ಯಾಸ್ ಸಿಲಿಂಡರ್’ ಬುಕಿಂಗ್ ಅವಧಿ ಇಳಿಕೆ, ಹೊಸ ನಿಯಮ ಜಾರಿ

ಹೋರ್ಮುಜ್ ಜಲಸಂಧಿಯ ದಿಗ್ಬಂಧನ ಹಾಗೂ ಗ್ಯಾಸ್ ಕೊರತೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಿಲಿಂಡರ್ ಬುಕಿಂಗ್‌ಗೆ ಕೆಲವು ನಿರ್ಬಂಧಗಳನ್ನು ಜಾರಿಗೆ ತಂದಿತ್ತು. ಇದರಿಂದ ಸಾಮಾನ್ಯ ಜನರಿಗೆ, ವಿಶೇಷವಾಗಿ ಮನೆಯಲ್ಲಿ ಹೆಚ್ಚು ಗ್ಯಾಸ್ ಅಗತ್ಯವಿರುವ ಕುಟುಂಬಗಳಿಗೆ ಸಾಕಷ್ಟು ತೊಂದರೆಯಾಗಿತ್ತು. ಇದೀಗ ಕೇಂದ್ರ ಸರ್ಕಾರ ಈ ನಿಯಮಗಳಲ್ಲಿ ಮತ್ತೊಮ್ಮೆ ಬದಲಾವಣೆ ಮಾಡಿದ್ದು, ಜನರಿಗೆ ಕೊಂಚ ರಿಲೀಫ್ ಸಿಕ್ಕಿದೆ.

ಇತ್ತೀಚೆಗೆ ದೇಶದಲ್ಲಿ ಗ್ಯಾಸ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ, ಒಂದು ಸಿಲಿಂಡರ್ ಪಡೆದ ಬಳಿಕ ಎರಡನೇ ಸಿಲಿಂಡರ್ ಬುಕ್ ಮಾಡಲು 45 ದಿನಗಳ ಕಾಲ ಕಾಯಬೇಕು ಎಂಬ ನಿಯಮವನ್ನು ಸರ್ಕಾರ ಜಾರಿಗೆ ತಂದಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ಈ ನಿಯಮವನ್ನು ಬದಲಾಯಿಸಿದೆ.

ಕೇಂದ್ರ ಸಚಿವ ಸುರೇಶ್ ಗೋಪಿ ಅವರ ಪ್ರಕಾರ, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಗ್ಯಾಸ್ ರೀಫಿಲ್‌ಗಳನ್ನು ನಿಗದಿತ ಅವಧಿಯೊಳಗೆ ಬುಕ್ ಮಾಡಲು ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹೊಸ ನಿಯಮ ಸೆಪ್ಟೆಂಬರ್ 7, ಸೋಮವಾರದಿಂದಲೇ ಜಾರಿಗೆ ಬಂದಿದೆ. ಇನ್ನು ಮುಂದೆ ಗ್ಯಾಸ್ ಸಿಲಿಂಡರ್ ಅನ್ನು ಮರುಬುಕ್ ಮಾಡಲು ಗ್ರಾಹಕರು 45 ದಿನಗಳ ಕಾಲ ಕಾಯಬೇಕಾಗಿಲ್ಲ. ಬದಲಾಗಿ, 25 ದಿನಗಳ ಬಳಿಕವೇ ಮತ್ತೊಂದು ಸಿಲಿಂಡರ್ ಬುಕ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಇದರಿಂದ ಗ್ಯಾಸ್ ಬಳಕೆದಾರರಿಗೆ ಎದುರಾಗುತ್ತಿದ್ದ ಸಮಸ್ಯೆಗಳು ಕಡಿಮೆಯಾಗಲಿವೆ.

ಸೆಪ್ಟೆಂಬರ್ 7ರಂದು ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಈ ಬದಲಾವಣೆಗಳನ್ನು ತಕ್ಷಣದಿಂದಲೇ ಜಾರಿಗೆ ತರಲು ಕೇಂದ್ರ ಸರ್ಕಾರ ತೈಲ ಮಾರುಕಟ್ಟೆ ಕಂಪನಿಗಳಿಗೆ (OMC) ಸೂಚನೆ ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಸಂಘರ್ಷದಿಂದ ತೈಲ ಕಂಪನಿಗಳ ಮೇಲೆ ಸಾಕಷ್ಟು ಒತ್ತಡ ಉಂಟಾಗಿದೆ. ಇದರ ಪರಿಣಾಮವಾಗಿ ಈ ಹಿಂದೆ ನಗರ ಪ್ರದೇಶಗಳಲ್ಲಿ 25 ದಿನ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 45 ದಿನಗಳ ಅಂತರವನ್ನು ನಿಗದಿಪಡಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.

ಹೋರ್ಮುಜ್ ಜಲಸಂಧಿಯ ದಿಗ್ಬಂಧನ ಹಾಗೂ ಗ್ಯಾಸ್ ಕೊರತೆಯ ಹಿನ್ನೆಲೆಯಲ್ಲಿ 45 ದಿನಗಳೊಳಗೆ ಮತ್ತೊಂದು ಗ್ಯಾಸ್ ಸಿಲಿಂಡರ್ ಬುಕ್ ಮಾಡದಂತೆ ನಿರ್ಬಂಧ ಹೇರಲಾಗಿತ್ತು. ಇದರಿಂದ ಸಾಮಾನ್ಯ ಜನರಿಗೆ ಸಾಕಷ್ಟು ಅನಾನುಕೂಲವಾಗಿತ್ತು. ಇದೀಗ ನಿಯಮದಲ್ಲಿ ಬದಲಾವಣೆ ಮಾಡಿರುವುದರಿಂದ, ವಿಶೇಷವಾಗಿ ಹೆಚ್ಚಿನ ಪ್ರಮಾಣದಲ್ಲಿ ಗ್ಯಾಸ್ ಬಳಸುವ ಕುಟುಂಬಗಳಿಗೆ ದೊಡ್ಡ ಮಟ್ಟದ ರಿಲೀಫ್ ಸಿಗುವ ನಿರೀಕ್ಷೆಯಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular