HomeBusinessBREAKING: ಗ್ರಾಹಕರಿಗೆ ಗುಡ್ ನ್ಯೂಸ್: ಗ್ಯಾಸ್ ಸಿಲಿಂಡರ್ ದರ ಇಳಿಕೆ

BREAKING: ಗ್ರಾಹಕರಿಗೆ ಗುಡ್ ನ್ಯೂಸ್: ಗ್ಯಾಸ್ ಸಿಲಿಂಡರ್ ದರ ಇಳಿಕೆ

ನವದೆಹಲಿ: ದೇಶದ ಜನತೆಗೆ ಜುಲೈ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಮೋದಿ 3.0 ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಲ್.ಪಿ.ಜಿ. ದರದಲ್ಲಿ ಮೊದಲ ಬಾರಿಗೆ ಇಳಿಕೆಯಾಗಿದೆ.

ವಾಣಿಜ್ಯ ಬಳಕೆ ಸಿಲಿಂಡರ್ ದರವನ್ನು 31 ರೂಪಾಯಿ ಇಳಿಕೆ ಮಾಡಲಾಗಿದೆ. ಗೃಹಬಳಕೆ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 19 ಕೆಜಿ ಸಿಲಿಂಡರ್ ದರ ಬೆಂಗಳೂರಲ್ಲಿ 1724 ಇದೆ. ದೆಹಲಿಯಲ್ಲಿ 1745 ರೂ., ಮುಂಬೈನಲ್ಲಿ 1698 ರೂ. ಇದೆ.

ಕಳೆದ ತಿಂಗಳು ವಾಣಿಜ್ಯ ಬಳಕೆ ಸಿಲಿಂಡರ್ ದರ 72 ರೂ. ಕಡಿತ ಮಾಡಲಾಗಿತ್ತು. ಈಗ 31 ರೂ. ಇಳಿಕೆಯಾಗಿದೆ ತೈಲ ಕಂಪನಿಗಳು ದರ ಪರಿಷ್ಕರಿಸಿದ್ದು, ಇಂದಿನಿಂದಲೇ ಪರಿಷ್ಕೃತ ದರಗಳು ಜಾರಿಗೆ ಬರಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular