HomeKarnatakaಇಂದಿರಾ ಕ್ಯಾಂಟೀನ್‌ಗಳಿಗಿಲ್ಲ ಸಿಲಿಂಡರ್ ಸಮಸ್ಯೆ, ಆಹಾರ ವಿತರಣೆ ನಿರಂತರ

ಇಂದಿರಾ ಕ್ಯಾಂಟೀನ್‌ಗಳಿಗಿಲ್ಲ ಸಿಲಿಂಡರ್ ಸಮಸ್ಯೆ, ಆಹಾರ ವಿತರಣೆ ನಿರಂತರ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ದೇಶದ ವಿವಿಧ ನಗರಗಳಲ್ಲಿ ಅಡುಗೆ ಅನಿಲದ ಕೊರತೆ ಎದುರಾಗಿದೆ. ಗೃಹ ಬಳಿಕೆ ಮತ್ತು ವಾಣಿಜ್ಯ ಬಳಕೆ ಸಿಲಿಂಡರ್ ಸಿಗುತ್ತಿಲ್ಲ ಎಂಬ ದೂರು ಸಾಮಾನ್ಯವಾಗಿದೆ. ಹಲವು ಹೋಟೆಲ್‌ಗಳು ಬಂದ್ ಆಗಿವೆ, ಕೆಲವು ಹೋಟೆಲ್‌ಗಳಲ್ಲಿ ಮೆನು ಕಡಿತ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲೆಂಡರ್‌ಗಳ ಸರಬರಾಜುನಲ್ಲಿ ಕೊರತೆ ಇದೆ. ಆದರೆ ಸಾರ್ವಜನಿಕರಿಗೆ ಅತ್ಯಂತ ಕಡಿಮೆ ದರದಲ್ಲಿ ಶುಚಿ ಮತ್ತು ರುಚಿಯಾದ ಊಟ ಮತ್ತು ಉಪಹಾರ ಒದಗಿಸುವ ಜಿಲ್ಲೆಯಲ್ಲಿರುವ ಇಂದಿರಾ ಕ್ಯಾಂಟೀನ್‌ಗಳು ಕಾರ್ಯ ನಿರ್ವಹಣೆ ಮಾಡುತ್ತಿವೆ.

ಅಡುಗೆ ಅನಿಲ ಸಿಲೆಂಡರ್‌ಗಳ ಕೊರತೆ ಕಂಡುಬರದಂತೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ನಿರಂತರವಾಗಿ ಎಂದಿನಂತೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆಹಾರವನ್ನು ಒದಗಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲೆಯಲ್ಲಿ ಕಾರವಾರ, ಶಿರಸಿ, ದಾಂಡೇಲಿ, ಭಟ್ಕಳ, ಕುಮಟಾ, ಅಂಕೋಲಾ, ಹಳಿಯಾಳ, ಹೊನ್ನಾವರ, ಸಿದ್ದಾಪುರ, ಯಲ್ಲಾಪುರ ತಾಲೂಕುಗಳು ಮತ್ತು ಜಾಲಿ ಹಾಗೂ ಮಂಕಿ ಪಟ್ಟಣ ಪಂಚಾಯತ್‌ಗಳಲ್ಲಿ ಒಟ್ಟು 13 ಇಂದಿರಾ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿವೆ. ಈ ಕ್ಯಾಂಟಿನ್‌ಗಳಿಗೆ ಕಾರವಾರ, ಶಿರಸಿ ದಾಂಡೇಲಿಯಲ್ಲಿ ವಾರಕ್ಕೆ 6, ಭಟ್ಕಳ, ಕುಮಟಾ, ಅಂಕೋಲಾ ಮತ್ತು ಹಳಿಯಾಳದಲ್ಲಿ ವಾರಕ್ಕೆ 4 ಮತ್ತು ಇತೆರೆಡೆಗಳಲ್ಲಿ ವಾರಕ್ಕೆ 3 ಗ್ಯಾಸ್ ಸಿಲೆಂಡರ್‌ಗಳ ಅಗತ್ಯವಿದೆ.

ಈ ಅಗತ್ಯತೆಗೆ ಅನುಗುಣವಾಗಿ ಸಂಬಂಧಪಟ್ಟ ವ್ಯಾಪ್ತಿಯ ಅನಿಲ ಸರಬರಾಜುದಾರರು ಗ್ಯಾಸ್ ಸಿಲೆಂಡರ್‌ಗಳನ್ನು ಸರಬರಾಜು ಮಾಡುತ್ತಿದ್ದು, ಇದುವರೆಗೂ ಈ ಕ್ಯಾಂಟೀನ್‌ಗಳಲ್ಲಿ ಅನಿಲ ಸಿಲೆಂಡರ್‌ಗಳ ಅಭಾವದ ಕುರಿತಂತೆ ಮತ್ತು ಆಹಾರ ವಿತರಣೆಯ ವ್ಯತ್ಯಯದ ಕುರಿತಂತೆ ಯಾವುದೇ ದೂರುಗಳು ಸಲ್ಲಿಕೆಯಾಗಿರುವುದಿಲ್ಲ.

ಜಿಲ್ಲೆಯಲ್ಲಿನ ಇಂದಿರಾ ಕ್ಯಾಂಟೀನ್‌ಗಳು, ಹಾಸ್ಟೆಲ್‌ಗಳು, ಆಸ್ಪತ್ರೆಗಳು, ಶಾಲೆಗಳ ಬಿಸಿಯೂಟ ವ್ಯವಸ್ಥೆ, ಅಂಗನವಾಡಿ ಮತ್ತಿತರ ಅಗತ್ಯ ಸೇವೆಗಳನ್ನು ಒದಗಿಸುವ ಸಂಸ್ಥೆಗಳಿಗೆ ಅಡುಗೆ ಅನಿಲದ ಯಾವುದೇ ಕೊರತೆಯಾಗದಂತೆ ಅಗತ್ಯಕ್ಕೆ ಅನುಗುಣವಾಗಿ ಸಿಲೆಂಡರ್‌ಗಳನ್ನು ಒದಗಿಸಲಾಗುವುದು ಎಂದು ಅನಿಲ ಸರಬರಾಜು ಸಂಸ್ಥೆಗಳ ಅಧಿಕಾರಿಗಳು ಈಗಾಗಲೇ ಸ್ಪಷ್ಟವಾಗಿ ತಿಳಿಸಿದ್ದಾರೆ.

“ಇಂದಿರಾ ಕ್ಯಾಂಟೀನ್‌ಗಳಿಗೆ ಈ ಹಿಂದಿನಿಂತೆ ಕೇಳಿದ ತಕ್ಷಣವೇ ಗ್ಯಾಸ್ ದೊರೆಯುತ್ತಿಲ್ಲ. ಆದರೆ ನಮ್ಮ ಅಗತ್ಯಕ್ಕೆ ಅನುಗುಣವಾಗಿ ಸಿಲೆಂಡರ್ ಸರಬರಾಜು ಮಾಡಲಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನಮ್ಮ ವ್ಯಾಪ್ತಿಯಲ್ಲಿ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿವೆ” ಎಂದು ಘಟ್ಟದ ಮೇಲಿನ ತಾಲೂಕುಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ನಿರ್ವಹಣೆ ಮಾಡುತ್ತಿರುವ ರಿವಾರ್ಡ್ ಸಂಸ್ಥೆಯ ವ್ಯವಸ್ಥಾಪಕ ರಾಘವೇಂದ್ರ ಹೇಳಿದರು.

“ಕರಾವಳಿ ಭಾಗದದಲ್ಲಿನ ನಮ್ಮ 9 ಕ್ಯಾಂಟೀನ್‌ಗಳಲ್ಲಿ ಗ್ಯಾಸ್ ಸಿಲೆಂಡರ್‌ಗಳ ಸಮಸ್ಯೆಯಾಗಿಲ್ಲ, ಆರಂಭದ ದಿನದಲ್ಲಿ ಒಂದು ಕ್ಯಾಂಟೀನ್‌ನಲ್ಲಿ ಮಾತ್ರ ಒಂದು ದಿನ ಸಮಸ್ಯೆಯಾಗಿದ್ದು, ಅಂದು ಸೌದೆ ಒಲೆ ಮೂಲಕ ಆಹಾರ ಸಿದ್ದಪಡಿಸಿದ ವಿತರಿಸಲಾಗಿದೆ. ಆ ನಂತರದಲ್ಲಿ ಇದುವರೆಗೂ ಯಾವುದೇ ಸಮಸ್ಯೆಯಾಗದಂತೆ ಸಾರ್ವಜನಿಕರಿಗೆ ಶುಚಿ ಮತ್ತು ರುಚಿಯಾದ ಆಹಾರ ವಿತರಿಸಲಾಗುತ್ತಿದೆ” ಎಂದು ಕರಾವಳಿ ಭಾಗದಲ್ಲಿ ತಾಲೂಕುಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ನಿರ್ವಹಣೆ ಮಾಡುತ್ತಿರುವ ಚೆಪ್ ಟೆಕ್ ಸಂಸ್ಥೆಯ ವ್ಯವಸ್ಥಾಪಕ ರಂಜನ್ ಶೆಟ್ಟಿ ತಿಳಿಸಿದ್ದಾರೆ.

ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಕಾರವಾರ ಮಾತನಾಡಿ, ಜಿಲ್ಲೆಯಲ್ಲಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಗ್ಯಾಸ್ ಸಿಲೆಂಡರ್ ಸಮಸ್ಯೆಯಾಗಿರುವ ಬಗ್ಗೆ ಇದುವರೆಗೂ ಯಾವುದೇ ದೂರುಗಳು ಸಲ್ಲಿಕೆಯಾಗಿಲ್ಲ, ಒಂದು ವೇಳೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಸಿಲೆಂಡರ್‌ಗಳ ಸಮಸ್ಯೆಯಾದಲ್ಲಿ ಕ್ಯಾಂಟೀನ್‌ಗಳ ಗುತ್ತಿಗೆದಾರರು/ ವ್ಯವಸ್ಥಾಪಕರು ಸಂಬಂಧಪಟ್ಟ ವ್ಯಾಪ್ತಿಯ ನಗರಸ್ಥಳೀಯ ಸಂಸ್ಥೆಯ ಪೌರಾಯುಕ್ತರು/ ಮುಖ್ಯಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular