HomeKarnatakaಡಿ. 31ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಬಂದ್ ವದಂತಿ ನಂಬಿ ಗ್ಯಾಸ್ ಏಜೆನ್ಸಿಗಳ ಮುಂದೆ...

ಡಿ. 31ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಬಂದ್ ವದಂತಿ ನಂಬಿ ಗ್ಯಾಸ್ ಏಜೆನ್ಸಿಗಳ ಮುಂದೆ ನೂಕು ನುಗ್ಗಲು

ಬೆಂಗಳೂರು: ಅಡುಗೆ ಅನಿಲಕ್ಕೆ ಸಬ್ಸಿಡಿ ಪಡೆಯುತ್ತಿರುವವರು ಡಿಸೆಂಬರ್ 31ರ ಒಳಗೆ ಇ-ಕೆವೈಸಿ ಮಾಡಿಸಬೇಕೆಂಬ ವದಂತಿ ನಂಬಿದ ಗ್ಯಾಸ್ ಏಜೆನ್ಸಿಗಳ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ನೂಕುನುಗ್ಗಲು ಉಂಟಾಗಿದೆ.

ಮಂಡ್ಯ, ಹಾಸನ, ಕೊಪ್ಪಳ, ಶಿವಮೊಗ್ಗ ಸೇರಿದಂತೆ ಹಲವೆಡೆ ವದಂತಿ ನಂಬಿದ ಜನ ಗ್ಯಾಸ್ ಏಜೆನ್ಸಿಗಳ ಎದುರು ಇ- ಕೆವೈಸಿ ಮಾಡಿಸಲು ಮುಗಿಬಿದ್ದಿದ್ದಾರೆ. ಡಿಸೆಂಬರ್ 31ರೊಳಗೆ ಇ-ಕೆವೈಸಿ ಮಾಡಿಸಿದವರಿಗೆ ಮಾತ್ರ ಸಬ್ಸಿಡಿ ಸಿಗಲಿದೆ. ಕೇಂದ್ರ ಸರ್ಕಾರ ಗ್ರಾಹಕರ ಖಾತೆಗೆ ಹಣ ಹಾಕಲಿದೆ ಎನ್ನುವ ವದಂತಿ ಹರಡಿದೆ. ಇದನ್ನು ನಂಬಿದ ಜನ ಗ್ಯಾಸ್ ಏಜೆನ್ಸಿ ಗಳ ಎದುರು ಮುಗಿಬಿದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಧಾರ್ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕ ನಿಗದಿಪಡಿಸಿಲ್ಲ

ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕವನ್ನು ಕೇಂದ್ರ ಸರ್ಕಾರವು ನಿಗದಿಪಡಿಸಿರುವುದಿಲ್ಲ. ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಇ-ಕೆವೈಸಿ ಮಾಡಿಸಬಹುದಾಗಿದ್ದು, ಸಾರ್ವಜನಿಕರು ಆತಂಕದಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ.

ಆದ್ದರಿಂದ ಅನಾವಶ್ಯಕವಾಗಿ ಗೊಂದಲ ಅಥವಾ ತಪ್ಪು ಮಾಹಿತಿಯಿಂದ ಗ್ಯಾಸ್ ಏಜೆನ್ಸಿಗಳ ಬಳಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿರುವುದಿಲ್ಲ ಹಾಗೂ ಸಿಲಿಂಡರ್ ವಿತರಿಸುವವರು ಮನೆಗೆ ಡೆಲಿವರಿ ಪಡೆಯುವ ವೇಳೆಯಲ್ಲಿ ಕೂಡ ಇ-ಕೆವೈಸಿ ಮಾಡಿಸಲು ಅವಕಾಶವಿರುತ್ತದೆ. ಅಲ್ಲದೇ ಹೆಲೋ ಬಿಪಿಸಿಎಲ್, ಇಂಡಿಯನ್ ಆಯಿಲ್ ಒನ್ ಮತ್ತು ವಿಟ್ರನ್ ಹೆಚ್‍ಪಿ ಗ್ಯಾಸ್ ಈ ಮೊಬೈಲ್ ಆಪ್‍ಗಳ ಮೂಲಕ ಇ-ಕೆವೈಸಿ ಮಾಡಿಸಬಹುದಾಗಿದೆ ಎಂದು ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular