ಕೋಲಾರ: ಎಲ್ ಪಿಜಿ ಸಿಲಿಂಡರ್ ಸಮಸ್ಯೆ ನಡುವೆಯೇ ಕೆಲ ಹೋಟೆಲ್, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ಗಳನ್ನು ತಹಶೀಲ್ದಾರ್ ವಶಕ್ಕೆ ಪಡೆದಿರುವ ಘಟನೆ ಕೋಲಾರ ನಗರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, 2 ಬೇಕರಿ ಮತ್ತು 5ಕ್ಕೂ ಹೆಚ್ಚು ಹೋಟೆಲ್ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದ್ದು, ಈ ವೇಳೆ ಮಾಲೀಕರು ವಾಣಿಜ್ಯ ಸಿಲಿಂಡರ್ ಬದಲು ಗೃಹಬಳಕೆ ಸಿಲಿಂಡರ್ ಬಳಸುತ್ತಿರುವುದು ಪತ್ತೆಯಾಗಿದೆ.
ಸದ್ಯ 21 ಸಿಲಿಂಡರ್ಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ದಾಳಿ ವೇಳೆ ಕೆಲವು ಹೋಟೆಲ್ಗಳಲ್ಲಿ ಸ್ವಚ್ಛತೆ ಇಲ್ಲದಿರುವುದು ಕೂಡ ಪತ್ತೆ ಆಗಿದೆ. ಹೀಗಾಗಿ ಸುರಭಿ ಹೋಟೆಲ್‌ನಲ್ಲಿ ಅಧಿಕಾರಿಗಳು ನೀರಿನ ಸ್ಯಾಂಪಲ್ ಸಂಗ್ರಹಿಸಿದ್ದಾರೆ.

