HomeBusinessಬ್ಯಾಂಕ್ ಖಾತೆದಾರರಿಗೆ ಮುಖ್ಯ ಮಾಹಿತಿ: 4 ನಾಮಿನಿ ಹೊಂದಲು ಅವಕಾಶ

ಬ್ಯಾಂಕ್ ಖಾತೆದಾರರಿಗೆ ಮುಖ್ಯ ಮಾಹಿತಿ: 4 ನಾಮಿನಿ ಹೊಂದಲು ಅವಕಾಶ

ನವದೆಹಲಿ: ಬ್ಯಾಂಕ್ ಖಾತೆದಾರರು ತಮ್ಮ ಖಾತೆಗಳಲ್ಲಿ 4 ನಾಮಿನಿಗಳನ್ನು ಹೊಂದಲು ಅವಕಾಶ ಕಲ್ಪಿಸುವ ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ -2024 ಲೋಕಸಭೆಯಲ್ಲಿ ಮಂಗಳವಾರ ಅಂಗೀಕಾರವಾಗಿದೆ.

ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಪ್ರಾಯೋಗಿಕವಾಗಿ ಮಂಡಿಸಿದ ಮಸೂದೆಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ. ಬಿಲ್ ಮೇಲಿನ ಚರ್ಚೆಗೆ ಉತ್ತರ ನೀಡಿದ ನಿರ್ಮಲಾ ಸೀತಾರಾಮನ್ ಠೇವಣಿದಾರರಿಗೆ ಉತ್ತರಾಧಿಕಾರತ್ವ ಅಥವಾ ಏಕಕಾಲಿಕ ನಾಮನಿರ್ದೇಶನ ಸೌಲಭ್ಯದ ಆಯ್ಕೆ ಇರಲಿದೆ ಎಂದು ತಿಳಿಸಿದ್ದಾರೆ.

ಲಾಕರ್ ಹೊಂದಿದವರು ಉತ್ತರಾಧಿಕಾರ ನಾಮನಿರ್ದೇಶನವನ್ನು ಮಾತ್ರ ಹೊಂದಿರುತ್ತಾರೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮಸೂದೆ ಅಂಗೀಕಾರದಿಂದ ಸಹಕಾರಿ ಬ್ಯಾಂಕುಗಳಲ್ಲಿನ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರು ಮತ್ತು ಪೂರ್ಣಾವಧಿಯ ನಿರ್ದೇಶಕರನ್ನು ಹೊರತುಪಡಿಸಿದ ನಿರ್ದೇಶಕರ ಅವಧಿ 8 ವರ್ಷಗಳಿಂದ 10 ವರ್ಷಗಳಿಗೆ ಹೆಚ್ಚಾಗಲಿದೆ. ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರು ಮತ್ತು ರಾಜ್ಯ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿಯಲ್ಲಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡುತ್ತದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular