ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ಹಣಾಹಣಿ

ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೆಕೆಆರ್ ನಡುವಣ ರೋಮಾಂಚನಕಾರಿ ಪಂದ್ಯದಲ್ಲಿ ಮೂರು ಓವರ್ ಬಾಕಿ ಇರುವಾಗಲೇ ಕೆಕೆಆರ್ ತಂಡ ಏಳು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ಕೆಕೆಆರ್  ತಂಡದ ಸ್ಪೋಟಕ ಬ್ಯಾಟಿಂಗ್ ಗೆ ಆರ್ಸಿಬಿ ತಂಡ ತತ್ತರಿಸಿ ಹೋಗಿದೆ.

ಇಂದು ಐಪಿಎಲ್ ನ ಹನ್ನೊಂದನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿದ್ದು, ಲಕ್ನೋದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಈ ಕ್ರೀಡಾಂಗಣದಲ್ಲಿ ಬ್ಯಾಟಿಂಗ್ ಮಾಡುವುದು ತುಂಬಾ ಕಷ್ಟಕರವಾಗಿದ್ದು, ಲಕ್ನೋ ತಂಡವೇ ಸಾಕಷ್ಟು ಬಾರಿ ಸೋಲು ಕಂಡಿರುವ ನಿದರ್ಶನವಿದೆ. ಈ ಬಾರಿಯ ಅಂಕಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ ಐದನೇ ಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ 10ನೇ ಸ್ಥಾನದಲ್ಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read