HomeKarnatakaನಾಳೆಯಿಂದ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಲಗೇಜ್ ದರ ಹೆಚ್ಚಳ

ನಾಳೆಯಿಂದ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಲಗೇಜ್ ದರ ಹೆಚ್ಚಳ

ಬೆಂಗಳೂರು: ನಾಳೆಯಿಂದ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಲಗೇಜ್ ದರ ಹೆಚ್ಚಳವಾಗಲಿದೆ. ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್ ದರವನ್ನು ಪರಿಷ್ಕರಣೆ ಮಾಡಲಾಗಿದೆ.

ಒಂದರಿಂದ ಐದು ಸ್ಟೇಜ್ ವರೆಗೆ 6 ರೂಪಾಯಿ, 6ರಿಂದ 12 ಸ್ಟೇಜ್ ವರೆಗೆ 12 ರೂಪಾಯಿ ದರ ನಿಗದಿ ಮಾಡಲಾಗಿದೆ. 156 ರಿಂದ 160 ಸ್ಟೇಜ್ ವರೆಗೆ 145ರೂ. ಗೆ ಹೆಚ್ಚಳ ಮಾಡಲಾಗಿದೆ. ಲಗೇಜ್ ದರವನ್ನು ಹೆಚ್ಚಳ ಮಾಡಿ ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷಾ ಆದೇಶ ಹೊರಡಿಸಿದ್ದಾರೆ.

2012ರಲ್ಲಿ ಪ್ರಯಾಣಿಕ ರಹಿತ ಲಗೇಜ್ ದರವನ್ನು ಏರಿಕೆ ಮಾಡಲಾಗಿದ್ದು, ಟಿಕೆಟ್ ದರ ಪರಿಷ್ಕರಣೆಯಾದಾಗ ಲಗೇಜ್ ದರವನ್ನು ಪರಿಷ್ಕರಣೆ ಮಾಡಿರಲಿಲ್ಲ. ನಾಳೆಯಿಂದ ಜಾರಿಯಾಗುವಂತೆ ಲಗೇಜ್ ದರ ಹೆಚ್ಚಳ ಮಾಡಲಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular