ಇಂದು ಚಂದ್ರಗ್ರಹಣ : ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯದಲ್ಲಿ ಬದಲಾವಣೆ

ಬೆಂಗಳೂರು : ಅಕ್ಟೋಬರ್ 28 ರ ಇಂದು  ಈ ವರ್ಷದ ಕೊನೆಯ ಚಂದ್ರ ಗ್ರಹಣೂ ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ದೇವಾಲಯಗಳ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಚಂದ್ರ ಗ್ರಹಣ ಹಿನ್ನೆಲೆ ಮೈಸೂರು ಚಾಮುಂಡೇಶ್ವರಿ ದೇಗುಲ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳ ಸಮಯ ಬದಲಾವಣೆ ಮಾಡಲಾಗಿದೆ.

ಇಂದು ಸಂಜೆ 6ರ ಬಳಿಕ ನಾಡ ದೇವತೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ.  ಭಾನುವಾರ ಬೆಳಗ್ಗೆ 7.30ಕ್ಕೆ ಮತ್ತೆ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ಚಾಮುಂಡಿ ಬೆಟ್ಟದ ಆಡಳಿತ ಮಂಡಳಿ ಅಧಿಕಾರಿ ಸಿ.ಜಿ.ಕೃಷ್ಣ ಮಾಹಿತಿ ನೀಡಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ರಾತ್ರಿಯ ಮಹಾಪೂಜೆ ಸಂಜೆ 6.30ಕ್ಕೆ ಮುಕ್ತಾಯವಾಗಲಿದ್ದು ಬಳಿಕ ದೇವರ ದರ್ಶನ ಮತ್ತು ರಾತ್ರಿಯ ಅನ್ನದಾನ ಇರುವುದಿಲ್ಲ. ಸಂಜೆ ನಡೆಯುವ ಆಶ್ಲೇಷ ಬಲಿ ಸೇವೆಯು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉಡುಪಿಯ ಕೃಷ್ಣಮಠದಲ್ಲಿ ಶ್ರೀ ಕೃಷ್ಣನ ದರ್ಶನಕ್ಕೆ ಸಮಯ ಬದಲಾವಣೆ ಮಾಡಲಾಗಿದೆ. ಇಂದು ಸಂಜೆ 4 ಗಂಟೆಯ ನಂತರ ಊಟದ ವ್ಯವಸ್ಥೆ ಸ್ಥಗಿತಗೊಳಿಸಲಾಗಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ, ರಾತ್ರಿಯ ಮಹಾಪೂಜೆ ಸಂಜೆ 6.30ರ ಒಳಗೆ ಮುಗಿಯುತ್ತದೆ. ಆದರೆ ದರ್ಶನ ಸಮಯದಲ್ಲಿ ಬದಲಾವಣೆ ಇಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read