HomeKarnatakaಚೀನಾದಲ್ಲಿ ಹೆಚ್ಚಿದ ಶ್ವಾಸಕೋಶ ಸೋಂಕು: ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ನಾಳೆ ಮಾರ್ಗಸೂಚಿ ಬಿಡುಗಡೆ ಸಾಧ್ಯತೆ

ಚೀನಾದಲ್ಲಿ ಹೆಚ್ಚಿದ ಶ್ವಾಸಕೋಶ ಸೋಂಕು: ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ನಾಳೆ ಮಾರ್ಗಸೂಚಿ ಬಿಡುಗಡೆ ಸಾಧ್ಯತೆ

ಬೆಂಗಳೂರು: ಕೋವಿಡ್ ನಂತರ ಚೀನಾದಲ್ಲಿ ಮತ್ತೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿದ್ದು, ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಕೋವಿಡ್ ತಾಂತ್ರಿಕ ಸಮಿತಿ ಸೋಮವಾರ ಮಹತ್ವದ ಸಭೆ ನಡೆಸಿದೆ.

ಕೇಂದ್ರ ಸರ್ಕಾರದ ಎಚ್ಚರಿಕೆಯ ಬೆನ್ನಲ್ಲೇ ರಾಜ್ಯ ಕೋವಿಡ್ ತಾಂತ್ರಿಕ ಸಮಿತಿಯ ಸಭೆ ನಡೆಸಲಾಗಿದ್ದು, ಸಮಿತಿಯ ಶಿಫಾರಸಿನ ಅನ್ವಯ ಸರ್ಕಾರದ ಅನುಮತಿ ಪಡೆದು ಬುಧವಾರ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಾ. ರಂದೀಪ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2019 ರಲ್ಲಿ ಇದೆ ಅವಧಿಯಲ್ಲಿ ಚೀನಾದಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು. ಆದರೆ ಚೀನಾ ಮಾಹಿತಿ ನೀಡದ ಕಾರಣ ವಿಶ್ವವ್ಯಾಪಿ ಸೋಂಕು ಹರಡಿತ್ತು. ಈಗ ಚೀನಾದಲ್ಲಿ ಚಳಿಗಾಲದಲ್ಲಿ ಉಸಿರಾಟ ಸಮಸ್ಯೆ ಏರಿಕೆ ಭೀತಿ ಹೆಚ್ಚಿದೆ. ಮಕ್ಕಳಲ್ಲಿ ನ್ಯೂಮೋನಿಯಾ ಜ್ವರ ಉಲ್ಬಣಿಸಿದೆ. ಬಹಳಷ್ಟು ಜನರಿಗೆ ಉಸಿರಾಟದ ಗಂಭೀರ ಸಮಸ್ಯೆ ಉಂಟಾಗಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಚೀನಾ ಮತ್ತೊಮ್ಮೆ ವೈರಸ್ ಹಾವಳಿಯಿಂದ ಕಂಗೆಟ್ಟಿದೆ.

ಈ ಬೆಳವಣಿಗೆಗಳ ನಡುವೆ ಕೇಂದ್ರ ಸರ್ಕಾರದ ಎಚ್ಚರಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್ ತಾಂತ್ರಿಕ ಸಮಿತಿ ಸಭೆ ನಡೆಸಿ ಮಾರ್ಗಸೂಚಿಗಳ ಜಾರಿಗೆ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular