HomeLatest News'ಎಕ್ಕ' ಚಿತ್ರದ ಲಿರಿಕಲ್ ಹಾಡು ರಿಲೀಸ್

‘ಎಕ್ಕ’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಯುವರಾಜ್ ಕುಮಾರ್ ಅಭಿನಯದ ರೋಹಿತ್ ಪದಕಿ ನಿರ್ದೇಶನದ ಬಹು ನಿರೀಕ್ಷಿತ ‘ಎಕ್ಕ’ ಸಿನಿಮಾ ಮುಂದಿನ ತಿಂಗಳು ಜುಲೈ 18ರಂದು ರಾಜ್ಯಾದ್ಯಂತ ತೆರೆ ಕಾಣಲು ಸಿದ್ಧವಾಗಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ‘ಎಕ್ಕ’ ಚಿತ್ರತಂಡ ನಿನ್ನೆಯಷ್ಟೇ ಲಿರಿಕಲ್ ಹಾಡೊಂದನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಿದ್ದು, ಗಾನಪ್ರಿಯರ ಗಮನ ಸೆಳೆದಿದೆ. ಆಂಥೋನಿ ದಾಸನ್ ಈ ಹಾಡಿಗೆ ಧ್ವನಿಯಾಗಿದ್ದು, ನಾಗಾರ್ಜುನ್ ಶರ್ಮಾ ಅವರ ಸಾಹಿತ್ಯ ಹಾಗೂ ಚರಣ್ ರಾಜ್ ಅವರ ಸಂಗೀತ ನಿರ್ದೇಶನವಿದೆ.

ಪಿಆರ್‌ಕೆ ಪ್ರೊಡಕ್ಷನ್ಸ್ ಜಯಣ್ಣ ಫಿಲಂಸ್ ಹಾಗೂ ಬಿ ಆರ್ ಕೆಆರ್‌ಜಿ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಜಯಣ್ಣ-ಭೋಗೇಂದ್ರ, ಹಾಗೂ ಕಾರ್ತಿಕ್, ಯೋಗಿ ರಾಜ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಮಾಸ್ತಿ, ರೋಹಿತ್ ಪದಕಿ ಮತ್ತು ವಿಕ್ರಮ್ ಮಾಥ್ವರ್ ಸಂಭಾಷಣೆ ಬರೆದಿದ್ದಾರೆ. ಯುವ ರಾಜಕುಮಾರ್, ಸಂಜನಾ ಆನಂದ್, ಸಂಪದಾ, ಪ್ರಮುಖ ಪಾತ್ರದಲ್ಲಿದ್ದು, ಅತುಲ್ ಕುಲಕರ್ಣಿ, ಆದಿತ್ಯ, ಶ್ರುತಿ ಕೃಷ್ಣ, ಪೂರಚಂದ್ರ, ರಹರುಣ, ಮೈಸೂರು ಪುರೇನಾಘ್ ದೇವ್ ಶೆಟ್ಟಿ, ಸಾಧು ಕೋಕಿಲ ಮತ್ತು ಹರಿಣಿ, ಉಳಿದ ಪಾತ್ರ ವರ್ಗದಲ್ಲಿದ್ದಾರೆ

For Latest News Updates, Join Our Whatsapp Community🚩
RELATED ARTICLES

Most Popular