HomeEntertainment'ಯುವ' ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

‘ಯುವ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಕಳೆದ ವಾರ ಬಿಡುಗಡೆಯಾಗಿದ್ದ  ಯುವ ರಾಜ್ ಕುಮಾರ್ ಅಭಿನಯದ ‘ಯುವ’ ಚಿತ್ರ ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಯುವ ರಾಜಕುಮಾರ್ ನಟನೆಗೆ ಪ್ರೇಕ್ಷಕ ಪ್ರಭುಗಳು ಫಿದಾ ಆಗಿದ್ದಾರೆ. ಯುವ ಸಿನಿಮಾದ ‘ಬದುಕು ಒಂದು ರಣರಂಗ’ ಎಂಬ ಲಿರಿಕಲ್ ಹಾಡು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ವ್ಯಾಸರಾಜ್ ಧ್ವನಿಯಾಗಿರುವ ಈ ಹಾಡಿಗೆ ಬಿ.ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದು, ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಾಹಿತ್ಯ ಬರೆದಿದ್ದಾರೆ.

ಸಂತೋಷನಂದ್ ರಾಮ್ ನಿರ್ದೇಶನದ ಈ ಚಿತ್ರದಲ್ಲಿ ಯುವರಾಜ್ ಕುಮಾರ್ ಮತ್ತು ಸಪ್ತಮಿ ಗೌಡ ಸೇರಿದಂತೆ ಸುಧಾರಾಣಿ, ಅಚ್ಯುತ್ ಕುಮಾರ್, ಗೋಪಾಲಕೃಷ್ಣ ದೇಶ್ಪಾಂಡೆ, ಹಿತಾ ಚಂದ್ರಶೇಖರ್, ಕಿಶೋರ್, ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ಆಶಿಕ್ ಸಂಕಲನ, ಶ್ರೀಶ ಕುಡುವಳ್ಳಿ ಛಾಯಗ್ರಹಣವಿದೆ. ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular