ಬೆಂಗಳೂರು: ಐಪಿಎಸ್ ಅಧಿಕಾರಿ, ಕನ್ನಡಿಗ ಡಾ.ಎಂ.ಎ. ಸಲೀಂ ಅವರನ್ನು ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇಂದು ಡಿಜಿ ಐಜಿಪಿಯಾಗಿರುವ ಡಾ. ಅಲೋಕ್ ಮೋಹನ್ ಅವರು ಸೇವೆಯಿಂದ ನಿವೃತ್ತರಾಗಲಿದ್ದು, ಈ ಸ್ಥಾನಕ್ಕೆ ಅವರನ್ನು ನೇಮಕ ಮಾಡಲಾಗಿದೆ. ಪ್ರಭಾರ ಡಿಜಿ ಐಜಿಪಿಯಾಗಿ ಸಲೀಂ ಅಧಿಕಾರವಹಿಸಿಕೊಂಡಿದ್ದಾರೆ. ಅವಧಿಯನ್ನು ವಿಸ್ತರಿಸಲಾಗಿದೆ.
ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಡಾ.ಎಂ.ಎಸ್. ಸಲೀಂ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2010ರಲ್ಲಿ ಬೆಂಗಳೂರು ವಿವಿಯಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ. ಯುಪಿಎಸ್ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕರ್ನಾಟಕ ಕೇಡರ್ ನ ಐಪಿಎಸ್ ಅಧಿಕಾರಿಯಾಗಿ 1993ರಲ್ಲಿ ಸೇವೆಗೆ ನೇಮಕವಾಗಿದ್ದರು. ಪ್ರಸ್ತುತ ಅವರು ಸಿಐಡಿ ಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಲಬುರಗಿ, ಕುಶಾಲನಗರ ಮತ್ತು ಸಾಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್ ಅಧಿಕಾರಿಯಾಗಿ, ಉಡುಪಿ ಜಿಲ್ಲಾ ಎಸ್ಪಿಯಾಗಿ ಬೆಂಗಳೂರು ನಗರ ಅಪರಾಧ ವಿಭಾಗದಲ್ಲಿ ಸಹಾಯಕ ಪೊಲೀಸ್ ಮಹಾನಿರ್ದೇಶಕರಾಗಿ, ಮೈಸೂರಿನ ನಗರದಲ್ಲಿ ಉಪ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.
ನಿರ್ಗಮಿತ ಡಿಜಿ ಐಜಿಪಿ ಡಾ. ಅಲೋಕ್ ಮೋಹನ್ ಅವರಿಂದ ಅಧಿಕಾರ ಸ್ವೀಕರಿಸಿದ್ದಾರೆ. ನೃಪತುಂಗ ರಸ್ತೆಯ ಡಿಜಿ ಐಜಿಪಿ ಕಚೇರಿಯಲ್ಲಿ ಸಲೀಂ ಅಧಿಕಾರ ಸ್ವೀಕರಿಸಿದ್ದಾರೆ. ಪ್ರಭಾರ ಡಿಜಿ ಐಜಿಪಿಯಾಗಿ ಡಾ. ಸಲೀಂ ಅವರನ್ನು ಸರ್ಕಾರ ನೇಮಕ ಮಾಡಿದೆ.