HomeKarnatakaಸಚಿವ ಎಂ.ಬಿ. ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್ ಕೋರಿ ದೂರು: ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದು ಮಾಹಿತಿ...

ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್ ಕೋರಿ ದೂರು: ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದು ಮಾಹಿತಿ ಕೇಳಿದ ರಾಜ್ಯಪಾಲರು

ಬೆಂಗಳೂರು: ಸಿಎ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನಿಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ. ಸಿಎ ಸೈಟ್ ಹಂಚಿಕೆಯಲ್ಲಿ ಭ್ರಷ್ಟಾಚಾರವಾಗಿದೆ. ಸಚಿವ ಎಂ.ಬಿ.ಪಾಟೀಲ್ ಕೈವಾಡ ಅಡಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ನಿರ್ದೇಶಿಸಲು ಕೋರಿದ್ದರು.

ಈ ಹಿನ್ನೆಲೆಯಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದು, ಎಂ.ಬಿ.ಪಾಟೀಲ್ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular