HomeKarnatakaನಟ ದರ್ಶನ್ ಗೆ ಮತ್ತೊಂದು ಶಾಕ್: ಇನ್ಮುಂದೆ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರೆಯಲು ಸಾಧ್ಯವಿಲ್ಲ; ಸಚಿವ...

ನಟ ದರ್ಶನ್ ಗೆ ಮತ್ತೊಂದು ಶಾಕ್: ಇನ್ಮುಂದೆ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರೆಯಲು ಸಾಧ್ಯವಿಲ್ಲ; ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ

ಹುಬ್ಬಳ್ಳಿ: ನಟ ದರ್ಶನ್ ಕೊಲೆ ಕೇಸ್ ನಲ್ಲಿ ಬಂಧನವಾಗಿದ್ದು, ಇನ್ಮುಂದೆ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದರ್ಶನ್ ಅವರನ್ನು ಕೃಷಿ ರಾಯಭಾರಿಯಾಗಿ ಮುಂದುವರೆಸಲಾಗದು. ದರ್ಶನ್ ಗೆ ವಿಐಪಿ ಸೌಕರ್ಯ ನೀಡಿರಲಿಲ್ಲ. ಕೊಲೆ ಕೇಸ್ ನಲ್ಲಿ ಬಂಧಿಸಲ್ಪಟ್ಟಿದ್ದು, ಅವರ ವಿರುದ್ಧ ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆಯಾಗಲಿದೆ ಎಂದರು.

ಇದೇ ವೇಳೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ವಿಚಾರವಾಗಿ ಮಾತನಾಡಿದ ಅವರು, ಪೋಕ್ಸೊ ಕೇಸ್ ತುಂಬಾ ಗಂಭೀರವಾದದ್ದು. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವ, ರಕ್ಷಣೆ ಮಾಡುವ ಪ್ರಶ್ನೆ ಇಲ್ಲ. ತಪ್ಪು ಮಾಡಿದ್ದಾರೋ ಇಲ್ಲವೋ ಎಂಬುದನ್ನು ನ್ಯಾಯಾಲಯ ತೀರ್ಮಾನ ಮಾಡಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular