HomeKarnatakaBIG NEWS: ಪ್ರಜ್ವಲ್ ರೇವಣ್ಣ ಒಬ್ಬ ಸೈಕೋ; ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ

BIG NEWS: ಪ್ರಜ್ವಲ್ ರೇವಣ್ಣ ಒಬ್ಬ ಸೈಕೋ; ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ

ವಿಜಯಪುರ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಸಚಿವ ಎಂ.ಬಿ.ಪಾಟೀಲ್, ಓರ್ವ ಸಂಸದನಾಗಿ ಈ ರೀತಿ ಮಾಡೋದಾ? ಆತ ಪಾತಾಳದಲ್ಲಿಯೇ ಅಡಗಿದ್ದರೂ ಹುಡುಕಿ ತಂದು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಒಬ್ಬ ಸಂಸದನಾಗಿ ಇಂತಹ ಕೃತ್ಯವೆಸಗಿದ್ದಾನೆ. ಪ್ರಜ್ವಲ್ ರೇವಣ್ಣ ಸೈಕೋ ಇದ್ದಾನೆ. 2000 ವಿಡಿಯೋ, 3000 ವಿಡಿಯೋಗಳನ್ನು ಮಾಡಿದ್ದಾನೆ. ಇವುಗಳು ಹೊಸದೋ, ಹಳೆಯದೋ. ಆತ ಒಬ್ಬ ಸೈಕೋ ಇದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಎಸ್ಐಟಿ ರಚಿಸಲಾಗಿದ್ದು, ತನಿಖೆ ಚುರುಕುಗೊಂಡಿದೆ. ಪ್ರಜ್ವಲ್ ಗೆ ನೋಟಿಸ್ ಕೂಡ ನೀಡಲಾಗಿದ್ದು, ವಿಚಾರಣೆಗೆ ಹಾಜರಾಗಲು ಡೆಡ್ ಲೈನ್ ಕೊಡಲಾಗಿದೆ. ಹಾಜರಾಗದಿದ್ದರೆ ಆತ ಎಲ್ಲಿಯೇ ಅಡಗಿರಲಿ, ಪಾತಾಳದಲ್ಲಿಯೇ ಇದ್ದರೂ ಕೂಡ ಆತನನ್ನು ಕರೆತಂದು ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular