KIADB ಕಚೇರಿಗಳಲ್ಲಿ ರೈತರ ಪರ ಕಾಣಿಸಿಕೊಳ್ಳುವ ಮಧ್ಯವರ್ತಿಗಳು, ಅವರಿಗೆ ಸಹಕರಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

ಬೆಂಗಳೂರು: ಕೆಐಎಡಿಬಿ ಕಚೇರಿಗಳಲ್ಲಿ ಕಾಣಿಸಿಕೊಳ್ಳುವ ದಲ್ಲಾಳಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ.

ಕೈಗಾರಿಕೆ ಪ್ರದೇಶಗಳ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡ ರೈತರ ಪರವಾಗಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳಲ್ಲಿ ದಲ್ಲಾಳಿಗಳು ಮಧ್ಯವರ್ತಿಗಳು ಕಾಣಿಸಿಕೊಂಡಲ್ಲಿ ಅವರ ವಿರುದ್ಧ ಮತ್ತು ಅವರ ಜೊತೆ ಕೈಜೋಡಿಸುವ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿ ಸುತ್ತೋಲೆ ಹೊರಡಿಸಿದ್ದಾರೆ.

ಕೆಐಎಡಿಬಿ ಕಚೇರಿಗಳಲ್ಲಿ ಸಂತ್ರಸ್ತ ರೈತರ ಪರವಾಗಿ, ಕೈಗಾರಿಕಾ ನಿವೇಶನಗಳು ಮಂಜೂರಾದ ಉದ್ಯಮಿಗಳು ಅಥವಾ ನಿವೇಶನದಾರರ ಹೆಸರಿನಲ್ಲಿ ಕೆಲವು ಅನಪೇಕ್ಷಿತ ವ್ಯಕ್ತಿಗಳು ಠಳಾಯಿಸುತ್ತಿರುವುದು ಗಮನಕ್ಕೆ ಬಂದಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ. ಜಮೀನು ಕಳೆದುಕೊಂಡ ರೈತರು ಅಥವಾ ಕಾನೂನು ಬದ್ಧ ವಾರಸುದಾರರು, ಪ್ರತಿನಿಧಿಗಳು ಮಾತ್ರ ಕಚೇರಿಗಳಿಗೆ ಬಂದು ಅಹವಾಲು ಸಲ್ಲಿಸಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಸರ್ಕಾರದ ಸುತ್ತೋಲೆಯನ್ನು ಕಡ್ಡಾಯವಾಗಿ ಕೆಐಎಡಿಬಿ ಕಚೇರಿಗಳಲ್ಲಿ ಪ್ರದರ್ಶಿಸಬೇಕು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read