HomeKarnatakaBIG NEWS: ಸುಪ್ರೀಂಕೋರ್ಟ್ ತೀರ್ಪು ದುರದೃಷ್ಟಕರ; ಬೆಂಗಳೂರಿಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು; ಸಚಿವ ಎಂ.ಬಿ.ಪಾಟೀಲ್...

BIG NEWS: ಸುಪ್ರೀಂಕೋರ್ಟ್ ತೀರ್ಪು ದುರದೃಷ್ಟಕರ; ಬೆಂಗಳೂರಿಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು; ಸಚಿವ ಎಂ.ಬಿ.ಪಾಟೀಲ್ ಆತಂಕ

ಬೆಂಗಳೂರು: ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ 5000 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ನೀಡಿರುವ ಆದೇಶ ದುರದೃಷ್ಟಕರ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಸುಪ್ರೀಂಕೋರ್ಟ್ ತೀರ್ಪು ದುರದೃಷ್ಟಕರ. ನಮಗೆ ನೀರಿಲ್ಲ, ಇಂತಹ ಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುವುದು ಕಷ್ಟ. ನಮಗೆ ಸಂಕಷ್ಟ ಸೂತ್ರವಿಲ್ಲ ವೈಜ್ಞಾನಿಕ ಸೂತ್ರ ಮಾಡಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು. ಕಾವೇರಿ ನದಿ ನೀರಿನ ವಿಚಾರವಾಗಿ ಕೇಂದ್ರ ಜಲಶಕ್ತಿ ಇಲಾಖೆ, ಪ್ರಾಧಿಕಾರ ಮಧ್ಯಪ್ರವೇಶ ಮಾಡಬೇಕು. ತಜ್ಞರ ತಂಡ ಕರೆಸಿ ಪರಿಶೀಲನೆ ನಡೆಸಲಿ. ನಂತರ ನೀರು ಬಿಡುವ ಬಗ್ಗೆ ತೀರ್ಮಾನ ಮಾಡಬೇಕು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular